ಬೆಂಗಳೂರು: ಶೀಘ್ರದಲ್ಲಿಯೇ ಹೊಸ ಕೈಗಾರಿಕಾ ನೀತಿಯನ್ನು ಜಾರಿಗೆ ತರಲಾಗುವುದು ಎಂದು ಮಧ್ಯಮ ಹಾಗೂ ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.
ಶೀಘ್ರದಲ್ಲಿಯೇ ಹೊಸ ಕೈಗಾರಿಕಾ ನೀತಿ ಜಾರಿ: ಸಚಿವ ಜಗದೀಶ್ ಶೆಟ್ಟರ್..! - ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್
ಸಂಪುಟದಲ್ಲಿ ಸಮ್ಮತಿ ಸಿಕ್ಕ ಬಳಿಕ ಶೀಘ್ರದಲ್ಲಿಯೇ ಹೊಸ ಕೈಗಾರಿಕಾ ನೀತಿಯನ್ನು ಜಾರಿಗೆ ತರಲಾಗುವುದು ಎಂದು, ಮಧ್ಯಮ ಹಾಗೂ ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.
'ಈಟಿವಿ ಭಾರತ'ದ ಜೊತೆ ಸಚಿವ ಜಗದೀಶ್ ಶೆಟ್ಟರ್ ಮಾತು
ಈ ಕುರಿತಾಗಿ 'ಈಟಿವಿ ಭಾರತ'ದ ಜೊತೆ ಮಾತನಾಡಿದ ಅವರು, ಕಾಯ್ದೆಯು ಸಂಪುಟದಲ್ಲಿ ಸಮ್ಮತಿ ಸಿಕ್ಕ ಬಳಿಕ ಜಾರಿಗೆ ಬರಲಿದೆ ಎಂದು ತಿಳಿಸಿದರು. 2 ಹಾಗೂ 3 ನೇ ದರ್ಜೆಯ ನಗರಕ್ಕೆ ಕೈಗಾರಿಕೆಗಳನ್ನು ಆಕರ್ಷಿಸುವ ಹಿನ್ನಲೆಯಲ್ಲಿ ಈ ನೀತಿ ಸಮಾಜಕ್ಕೆ ನೀಡಲಿದ್ದೇವೆ ಎಂದು ಹೇಳಿದರು.
ಇನ್ನು ಟೌನ್ಶಿಪ್ಗಳ ಬೇಡಿಕೆ ಹೆಚ್ಚಾಗಿದ್ದು, ನಗರಾಭಿವೃದ್ಧಿ ಸಚಿವರೊಂದಿಗೆ ಹಾಗೂ ಕಾರ್ಯದರ್ಶಿಗಳೊಂದಿಗೆ ಚರ್ಚೆ ಮಾಡಿದ್ದೇನೆ. ಶೀಘ್ರದಲ್ಲಿ ನಗರಾಭಿವೃದ್ಧಿ ಇಲಾಖೆಯ ಒಪ್ಪಿಗೆ ಪಡೆದು, ಕೈಗಾರಿಕಾ ಟೌನ್ಶಿಪ್ ಪ್ರಾರಂಭ ಮಾಡಲಾಗುವುದು ಎಂದರು.