ಕರ್ನಾಟಕ

karnataka

ETV Bharat / state

ಪಕ್ಷ ಸಂಘಟನೆಗೆ ಸಿದ್ದು ಸಹಕಾರ ಕೋರಿದ ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆಶಿ.. - ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಲೆಟೆಸ್ಟ್ ನ್ಯೂಸ್​

ಪಕ್ಷ ಸಂಘಟನೆ ಬಗ್ಗೆ ಉಭಯ ನಾಯಕರು ಸುದೀರ್ಘ ಚರ್ಚೆ ನಡೆಸಿದರು. ನಂತರ ಸಿದ್ದರಾಮಯ್ಯನವರ ಸಹಕಾರ ಕೋರಿ ಅಲ್ಲಿಂದ ಡಿಕೆಶಿ ತೆರಳಿದರು. ಈ ವೇಳೆ ಸಂಸದ ಡಿ ಕೆ ಸುರೇಶ್ ಸಹ ಹಾಜರಿದ್ದರು.

ಸಿದ್ದರಾಮಯ್ಯ ನಿವಾಸಕ್ಕೆ ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭೇಟಿ
New KPCC President DK Shivakumar visits siddaramaiah residence

By

Published : Mar 14, 2020, 6:06 PM IST

ಬೆಂಗಳೂರು :ಕೆಪಿಸಿಸಿ ನೂತನ ಅಧ್ಯಕ್ಷ ಡಿ ಕೆ ಶಿವಕುಮಾರ್ ಇಂದು ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿ ಅಭಿನಂದನೆ ಹಾಗೂ ಕೃತಜ್ಞತೆ ಸಲ್ಲಿಸಿದರು.

ಸಿದ್ದರಾಮಯ್ಯ ಅವರಿಗೆ ಶಾಲು ಹೊದಿಸಿ ಹಾರ ಹಾಕಿ ಅಭಿನಂದಿಸಿದರು. ಈ ವೇಳೆ ಸಿದ್ದರಾಮಯ್ಯ ಅವರು ಸಹ ಡಿ ಕೆ ಶಿವಕುಮಾರ್ ಅವರನ್ನು ಅಭಿನಂದಿಸಿ ಶುಭ ಹಾರೈಸಿದರು. ಇದಾದ ಬಳಿಕ ಪಕ್ಷ ಸಂಘಟನೆ ಬಗ್ಗೆ ಉಭಯ ನಾಯಕರು ಸುದೀರ್ಘ ಚರ್ಚೆ ನಡೆಸಿದರು. ನಂತರ ಸಿದ್ದರಾಮಯ್ಯನವರ ಸಹಕಾರ ಕೋರಿ ಅಲ್ಲಿಂದ ಡಿಕೆಶಿ ತೆರಳಿದರು. ಈ ವೇಳೆ ಸಂಸದ ಡಿ ಕೆ ಸುರೇಶ್ ಸಹ ಹಾಜರಿದ್ದರು.

ಸಿದ್ದರಾಮಯ್ಯ ನಿವಾಸಕ್ಕೆ ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭೇಟಿ

ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಡಿ ಕೆ ಶಿವಕುಮಾರ್, ಕೃತಜ್ಞತೆ ಸಲ್ಲಿಸಲು ಬಂದಿದ್ದೆ ಅಷ್ಟೇ.. ಕೊರೊನಾ ಬಗ್ಗೆ ಹೆಚ್ಚು ಭಯ ಮೂಡಿಸುವುದು ಬೇಡ. ಸರ್ಕಾರ ಈ ಬಗ್ಗೆ ಹೆಚ್ಚಿನ ಮುತುವರ್ಜಿವಹಿಸಲಿ. ಇದೇ ಸಂದರ್ಭದಲ್ಲಿ ಹೊಸೂರಿನ ಡಿಎಂಕೆ ಸ್ಥಳೀಯ ಮುಖಂಡರು ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದರು. ಜತೆಗೆ ಉಭಯ ನಾಯಕರಿಗೆ ಸಹಕಾರ ನೀಡೋದಾಗಿ ಡಿಎಂಕೆ ನಾಯಕರು ಭರವಸೆ ನೀಡಿದರು.

ಖರ್ಗೆ ನಿವಾಸಕ್ಕೆ ಡಿಕೆಶಿವ ಕುಮಾರ್​ ಭೇಟಿ

ಖರ್ಗೆ ನಿವಾಸಕ್ಕೂ ಡಿಕೆಶಿ :ಸಿದ್ದರಾಮಯ್ಯನವರ ಭೇಟಿ ಬಳಿಕ ಡಿ ಕೆ ಶಿವಕುಮಾರ್ ಅವರು, ಕೇಂದ್ರದ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವನಗರ ನಿವಾಸಕ್ಕೂ ತೆರಳಿ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಸದ ಡಿ ಕೆ ಸುರೇಶ್, ಕುಣಿಗಲ್ ಶಾಸಕ ಡಾ.ರಂಗನಾಥ್ ಸಹ ಹಾಜರಿದ್ದರು.

For All Latest Updates

TAGGED:

ABOUT THE AUTHOR

...view details