ಬೆಂಗಳೂರು:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ನಾಳೆ ನಡೆಯುತ್ತಿದ್ದು, ಬೆಳಗ್ಗೆ 10.30ಕ್ಕೆ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಸರ್ಕಾರದ ಪರವಾಗಿ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರಕ್ಕೆ ಅನುಮತಿ ಕೋರಿದ್ದು, ಅದರಂತೆ ನಾಳೆ ಬೆಳಗ್ಗೆ 10.30 ಕ್ಕೆ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ರಾಜಭವನದಲ್ಲಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಅಧಿಕೃತವಾಗಿ ರಾಜಭವನದಿಂದ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಆಹ್ವಾನವನ್ನು ಕಳಿಸಿಕೊಡಲಾಗಿದೆ.