ಬೆಂಗಳೂರು: ಕೆಸಿಆರ್ ಭಾರತ ರಾಷ್ಟ್ರ ಸಮಿತಿ (BRS) ಪಕ್ಷ ಸ್ಥಾಪನೆ ಮಾಡಲಿರುವ ಹಿನ್ನೆಲೆ 20 ಶಾಸಕರ ಜೊತೆ ವಿಶೇಷ ವಿಮಾನದ ಮೂಲಕ ಹೆಚ್.ಡಿ.ಕುಮಾರಸ್ವಾಮಿ ಹೈದ್ರಾಬಾದ್ಗೆ ತೆರಳಿದ್ದಾರೆ. ನಾಳೆ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ನೂತನ ರಾಷ್ಟ್ರೀಯ ಪಕ್ಷ ಘೋಷಣೆ ಮಾಡಲಿದ್ದಾರೆ. ಆ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಭಾಗಿಯಾಗಲಿದ್ದಾರೆ.
ಕೆಸಿಆರ್ ಅವರಿಂದ ನಾಳೆ ರಾಷ್ಟ್ರೀಯ ಪಕ್ಷ ಘೋಷಣೆ : ಶಾಸಕರ ಜೊತೆ ಹೈದರಾಬಾದ್ ತೆರಳಿದ ಹೆಚ್ಡಿಕೆ - ಈಟಿವಿ ಭಾರತ ಕನ್ನಡ
ಕೆ.ಚಂದ್ರಶೇಖರ್ ರಾವ್ ನಾಳೆ ನೂತನ ರಾಷ್ಟ್ರೀಯ ಪಕ್ಷ ಘೋಷಣೆ ಮಾಡಲಿದ್ದು, ಈ ಹಿನ್ನೆಲೆಯಲ್ಲಿ ಹೆಚ್ಡಿ ಕುಮಾರಸ್ವಾಮಿ ಇಪ್ಪತ್ತು ಶಾಸಕರೊಂದಿಗೆ ಇಂದು ಹೈದರಾಬಾದ್ಗೆ ತೆರಳಿದ್ದಾರೆ.
ಕೆಸಿಆರ್ ರಿಂದ ನಾಳೆ ರಾಷ್ಟ್ರೀಯ ಪಕ್ಷ ಘೋಷಣೆ
ಪಕ್ಷ ಸ್ಥಾಪನೆ ಬಗ್ಗೆ ಕೆಲ ತಿಂಗಳ ಹಿಂದೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಜೊತೆ ಕೆಸಿಆರ್ ಚರ್ಚೆ ನಡೆಸಿದ್ದರು. ಕೆಲ ತಿಂಗಳ ಹಿಂದೆಯಷ್ಟೇ ಹೈದರಾಬಾದ್ಗೆ ತೆರಳಿ ಕೆಸಿಆರ್ ಜತೆ ಹೆಚ್ಡಿಕೆ ಚರ್ಚೆ ನಡೆಸಿದ್ದರು. ಇಂದು ಹೈದ್ರಾಬಾದ್ನಲ್ಲೇ ಶಾಸಕರ ಜೊತೆ ಹೆಚ್.ಡಿ.ಕುಮಾರಸ್ವಾಮಿ ವಾಸ್ತವ್ಯ ಹೂಡಲಿದ್ದು, ನಾಳೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಇದನ್ನೂ ಓದಿ :ಕೆಸಿಆರ್ ಪಿಎಂ ಆಗಲಿ: ಮದ್ಯದ ಬಾಟಲಿ, ಕೋಳಿ ವಿತರಿಸಿದ ಟಿಆರ್ಎಸ್ ಮುಖಂಡ!
TAGGED:
ಕೆಸಿಆರ್ ಭಾರತ ರಾಷ್ಟ್ರ ಸಮಿತಿ