ಕರ್ನಾಟಕ

karnataka

ETV Bharat / state

ವಾಹನ ಸವಾರರೇ ಹುಷಾರ್: ಸಂಚಾರ ನಿಯಮ ಉಲ್ಲಂಘಿಸಿದ್ರೆ ಬೀಳುತ್ತೆ ಭಾರಿ ದಂಡ - A hefty fine

ಮೋಟಾರು ವಾಹನ ತಿದ್ದುಪಡಿ ಮಸೂದೆ ಸಂಸತ್ತಿನಲ್ಲಿ ಮಂಡನೆಯಾದ ಬಳಿಕ ಇದೀಗ ಅಧಿಕೃತವಾಗಿ ಜಾರಿಯಾಗಿದೆ. ಸಂಚಾರ ನಿಯಮ ಉಲ್ಲಂಘಿಸಿದರೆ ಭಾರಿ ದಂಡ ಬೀಳಲಿದೆ. ಈ ಹಿನ್ನಲೆ ಸಿಲಿಕಾನ್ ಸಿಟಿ ಸಂಚಾರಿ ಪೊಲೀಸರು ಫುಲ್ ಅಲರ್ಟ್ ಆಗಿದ್ದು, ಸಂಚಾರಿ ನಿಯಮ ಉಲ್ಲಂಘಿಸುವವರ ವಿರುದ್ದ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದಾರೆ.

ಸಂಚಾರ ನಿಯಮ ಉಲ್ಲಂಘಿಸಿದರೆ ಬೀಳುತ್ತೆ ಭಾರಿ ದಂಡ

By

Published : Aug 2, 2019, 6:25 AM IST

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಕುರಿತ ಮೋಟಾರು ವಾಹನ ತಿದ್ದುಪಡಿ ಕಾಯ್ದೆ ಅಧಿಕೃತವಾಗಿ ಜಾರಿಗೆ ಬಂದಿದ್ದು, ನಗರ ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹರಿಶೇಖರನ್ ಆದೇಶದ ಮೇರೆಗೆ ಸಿಲಿಕಾನ್ ಸಿಟಿಯ ಎಲ್ಲಾ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಅಲರ್ಟ್ ಆಗಿ ಅಖಾಡಕ್ಕೆ ಇಳಿದಿದ್ದಾರೆ.

ನಗರದ ಎಲ್ಲೆಡೆ ಆಯಾ ಠಾಣಾ ವ್ಯಾಪ್ತಿಯ ಸಿಬ್ಭಂದಿ ಸಂಚಾರ ನಿಯಮ ಉಲ್ಲಂಘಿಸುವ ವಾಹನ ಸವಾರರನ್ನು ಹಿಡಿದು ದಂಡ ಹಾಕುವ ಕಾರ್ಯದಲ್ಲಿ ತೊಡಗಿದ್ದಾರೆ.

ಹೊಸ ನಿಯಮದ ಪ್ರಕಾರ ಮಿತಿ ಮೀರಿದ ವೇಗದ ಚಾಲನೆಗೆ 500 ರೂ.ಯಿಂದ 1 ಸಾವಿರ ರೂ. ದಂಡ, ವಾಹನ ಚಲಾಯಿಸುವಾಗ ಮೊಬೈಲ್ ಬಳಸಿದರೆ 1 ಸಾವಿರ ರೂ. ದಂಡ, ಚಾಲನೆ ವೇಳೆ 2ನೇ ಬಾರಿ ಮೊಬೈಲ್ ಬಳಸಿ ಸಿಕ್ಕಿಬಿದ್ದರೆ 2 ಸಾವಿರ ರೂ. ದಂಡ. ನೋಂದಣಿ ಇಲ್ಲದೆ ವಾಹನ ಚಲಾಯಿದ್ರೆ ಮೊದಲ ಬಾರಿಗೆ 5 ಸಾವಿರ ರೂ. ದಂಡ‌ ವಿಧಿಸಲಾಗುತ್ತದೆ.

ಹೀಗಾಗಿ ಆಯಾ ಠಾಣಾ ಸಿಬ್ಬಂದಿ ಅಖಾಡಕ್ಕಿಳಿದಿದ್ದು ನಿಯಮ ಉಲ್ಲಂಘಿಸುವವರ ವಿರುದ್ದ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದಾರೆ.

ABOUT THE AUTHOR

...view details