ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿನ ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷ ಆಚರಣೆಗೆ ನಿಷೇಧ ಹೇರಲಾಗುತ್ತಿದೆ ಎಂದು ಸಚಿವ ಆರ್.ಅಶೋಕ್ ಸ್ಪಷ್ಟಪಡಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಹೊಸ ವರ್ಷ ಆಚರಣೆಯನ್ನು ಎಂಜಿ ರೋಡ್, ಬ್ರಿಗೇಡ್ ರೋಡ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮಾಡುವ ಹಾಗಿಲ್ಲ. ಮನೆಯಲ್ಲಿ ಮಾತ್ರ ಹೊಸ ವರ್ಷ ಆಚರಣೆಗೆ ಅವಕಾಶ ಇದೆ. ಹೋಟೆಲ್, ಪಬ್ಗಳಲ್ಲಿ ಶೇ. 50ರಷ್ಟು ಗ್ರಾಹಕರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಅಲ್ಲದೆ ಪಾಸ್ ಪಡೆದುಕೊಳ್ಳುವುದು ಕಡ್ಡಾಯ ಮಾಡಲಾಗಿದೆ. ಈ ಬಗ್ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಪ್ರಸ್ತಾವನೆ ಕಳುಸಿಕೊಡಲಾಗಿದೆ. ಅವರು ಅನುಮೋದನೆ ಕೊಟ್ಟ ಬಳಿಕ ನಿಮಯ ಜಾರಿಗೊಳಿಸಲಾಗುವುದು ಎಂದರು.