ಬೆಂಗಳೂರು: ಆನೇಕಲ್ ತಾಲೂಕಿನ ಹುಲ್ಲಹಳ್ಳಿಯ ಖಾಲಿ ಜಮೀನಿನಲ್ಲಿ ನವಜಾತ ಶಿಶುವೊಂದು ಪತ್ತೆಯಾಗಿದ್ದು ಬನ್ನೇರುಘಟ್ಟ ಪೊಲೀಸರು ಶಿಶುವನ್ನು ರಕ್ಷಿಸಿದ್ದಾರೆ. ಮಂಗಳವಾರ ಬೆಳಗ್ಗೆ ಸಿದ್ದಲಾಂಗಾರೆಡ್ಡಿ ಜಮೀನಿನಲ್ಲಿ ಮಗು ಅಳುತ್ತಿರುವ ಶಬ್ದ ಕೇಳಿದ ಸ್ಥಳೀಯರು ಹತ್ತಿರ ಹೋಗಿ ನೋಡಿದಾಗ ನವಜಾತ ಶಿಶು ಪತ್ತೆಯಾಗಿದೆ. ನಂತರ ಸ್ಥಳೀಯರು ಬನ್ನೇರುಘಟ್ಟ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಧಾವಿಸಿದ ಶಿಶು ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿ ಕವಿತಾ, ಇನ್ಸ್ಪೆಕ್ಟರ್ ಉಮಾಮಹೇಶ್ ಶಿಶುವನ್ನು ಜಿಗಣಿ ಆಸ್ಪತ್ರೆಗೆ ಪ್ರಾಥಮಿಕ ಆರೈಕೆಗೆ ರವಾನಿಸಿದ್ದಾರೆ. ನಂತರ ಶಿಶುವನ್ನು ಆನೇಕಲ್ ಆಸ್ಪತ್ರೆಗೆ ಕರೆದೊಯ್ದು ಅಲ್ಲಿಂದ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ ಹೆಚ್ಚಿನ ಆರೈಕೆಗೆ ಕಳುಹಿಸಿಕೊಡಲಾಗಿದೆ ಎಂದು ಕವಿತಾ ತಿಳಿಸಿದ್ದಾರೆ.
ಈ ಕುರಿತಂತೆ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ವಾಣಿ ವಿಲಾಸ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನವಜಾತ ಶಿಶುವನ್ನು, ಶಿಶುಪಾಲನಾ ಕೇಂದ್ರಕ್ಕೆ ರವಾನಿಸಲಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ವೈದ್ಯಲೋಕಕ್ಕೆ ಅಚ್ಚರಿ ಮೂಡಿಸಿದ ವಿಚಿತ್ರ ಮಗು: ಒಂದೇ ದೇಹದಲ್ಲಿ ಎರಡು ಹೃದಯ, ನಾಲ್ಕು ಕೈ ಕಾಲು
ಇದನ್ನು ಓದಿ:ರೈಲಿನಲ್ಲಿ ಮಹಿಳೆಗೆ ಬೆಂಕಿ ಹಚ್ಚಿದ ಪ್ರಕರಣ: ಮಗು, ಮಹಿಳೆ ಸೇರಿ ಮೂವರ ಶವ ಹಳಿಯಲ್ಲಿ ಪತ್ತೆ
ನವಜಾತ ಶಿಶುವನ್ನು ಕಚ್ಚಿಕೊಂಡು ತಿರುಗಾಡಿದ್ದ ನಾಯಿ:ನಾಯಿಯೊಂದು ಅಪರಿಚಿತ ಹೆಣ್ಣು ನವಜಾತ ಶಿಶುವನ್ನು ಬಾಯಿಯಲ್ಲಿ ಕಚ್ಚಿಕೊಂಡು ತಿರುಗಾಡಿದ ಘಟನೆ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದಿತ್ತು. ನಾಯಿ ತನ್ನ ಬಾಯಿಯಲ್ಲಿ ಶಿಶುವನ್ನು ಹಿಡಿದುಕೊಂಡು ಓಡಾಡುತ್ತಿರುವುದನ್ನು ಭದ್ರತಾ ಸಿಬ್ಬಂದಿ ಗಮನಿಸಿ, ಅದನ್ನು ಓಡಿಸಿದ್ದರು. ಆದರೆ, ಅಷ್ಟರಲ್ಲೇ ಶಿಶು ಮೃತಪಟ್ಟಿರುವುದು ಗೊತ್ತಾಗಿತ್ತು.