ಬೆಂಗಳೂರು:ನಗರದ ಪುಟ್ಟೇನಹಳ್ಳಿಯ ಮನೆಯೊಂದರಲ್ಲಿ ನವವಿವಾಹಿತೆಯೊಬ್ಬರ ಮೃತದೇಹ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶನಿವಾರ ಪತ್ತೆಯಾಗಿದೆ. ಈ ಬಗ್ಗೆ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಹಾರಿಕಾ ಸಾವನ್ನಪ್ಪಿದ ಮಹಿಳೆ. ಇವರ ತಂದೆ ನೀಡಿದ ದೂರಿನ ಮೇರೆಗೆ ಪತಿ ಕಾರ್ತಿಕ್ ಹಾಗೂ ಮನೆಯವರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ನಿಹಾರಿಕಾ ಹಾಗೂ ಕಾರ್ತಿಕ್ ಐದು ವರ್ಷಗಳಿಂದ ಪ್ರೀತಿಸಿ ಕಳೆದ ಜೂನ್ನಲ್ಲಿ ಮದುವೆಯಾಗಿದ್ದರು. ಕಾರ್ತಿಕ್ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರೆ, ಪತ್ನಿ ಗೃಹಿಣಿಯಾಗಿದ್ದಳು. ಆರಂಭದಲ್ಲಿ ಅನ್ಯೋನ್ಯವಾಗಿದ್ದ ದಂಪತಿಯ ನಡುವೆ ಕಾಲಕ್ರಮೇಣ ಬಿರುಕು ಮೂಡಿತ್ತು ಎನ್ನಲಾಗುತ್ತಿದೆ.