ಕರ್ನಾಟಕ

karnataka

ETV Bharat / state

ನೈರುತ್ಯ ಮುಂಗಾರು ಒಳನಾಡಿನಲ್ಲಿ ದುರ್ಬಲ, ಕರಾವಳಿಯಲ್ಲಿ ಚುರುಕು: ಹವಾಮಾನ ಇಲಾಖೆ - ಹವಾಮಾನ ಇಲಾಖೆ ಮಾಹಿತಿ

ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡಿದ್ದು, ಮುಂದಿನ 48 ಗಂಟೆಗಳಲ್ಲಿ ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

next-48-hours-heavy-rain-in-coastal-areas   Meteorological Department
ನೈರುತ್ಯ ಮುಂಗಾರು ಒಳನಾಡಿನಲ್ಲಿ ದುರ್ಬಲ, ಕರಾವಳಿಯಲ್ಲಿ ಚುರುಕು: ಹವಾಮಾನ ಇಲಾಖೆ

By ETV Bharat Karnataka Team

Published : Sep 11, 2023, 9:09 PM IST

ಬೆಂಗಳೂರು :ನೈರುತ್ಯ ಮುಂಗಾರು ಒಳನಾಡಿನಲ್ಲಿ ದುರ್ಬಲವಾಗಿದ್ದು, ಕರಾವಳಿಯಲ್ಲಿ ಸಾಮಾನ್ಯವಾಗಿದೆ. ಇದರ ಪರಿಣಾಮ ಕರಾವಳಿಯಲ್ಲಿ ವ್ಯಾಪಕವಾಗಿ, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಾತ್ರ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ 48 ಗಂಟೆಗಳಲ್ಲಿ ಕರಾವಳಿಯ ಬಹುತೇಕ ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಕೆಲವು ಕಡೆ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ ಎಂದು ಇಲಾಖೆ ಹೇಳಿದೆ. ಮುಂದಿನ ಸೆಪ್ಟೆಂಬರ್ 12 ಮತ್ತು 13ರಂದು ಎರಡು ದಿನಗಳ ಕಾಲ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ಒಳನಾಡಿನಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30ರಿಂದ 40 ಕಿ.ಮೀ. ಇರಲಿದೆ. ಮೀನುಗಾರರಿಗೆ ಯಾವುದೇ ಎಚ್ಚರಿಕೆಯನ್ನು ನೀಡಲಾಗಿಲ್ಲ ಎಂದು ಹೇಳಿದೆ.

ಮುಂದಿನ 2 ದಿನ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಕೆಲವು ಕಡೆಗಳಲ್ಲಿ ಹಗುರ ಮಳೆಯಾಗಲಿದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ದಾಖಲಾಗುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದೆ.

ನಿನ್ನೆ ದಾಖಲಾದ ಮಳೆಯ ಪ್ರಮಾಣ: ಅತಿ ಹೆಚ್ಚು ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ 6 ಸೆಮೀ, ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ 5 ಸೆಮೀ , ಉಡುಪಿಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ, ಪುತ್ತೂರಿನಲ್ಲಿ ಮತ್ತು ಕುಂದಾಪುರದಲ್ಲಿ ತಲಾ 4 ಸೆಮೀ ಮಳೆಯಾಗಿದೆ.

ಕಳೆದ ವಾರದಲ್ಲಿ ರಾಜ್ಯದ ಹಲವೆಡೆ ಭಾರಿ ಮಳೆಯಾಗಿದ್ದು, ಬೀದರ್​, ಕಲಬುರಗಿ, ಮೈಸೂರು ಸೇರಿದಂತೆ ವಿವಿದೆಡೆ ಧಾರಾಕಾರ ಮಳೆಯಾಗಿತ್ತು. ಬೀದರ್​ನಲ್ಲಿ 7 ಸೆಂ.ಮೀ ಮತ್ತು ಕಲಬುರಗಿಯಲ್ಲಿ 8 ಸೆಂ.ಮೀ ಮಳೆ ದಾಖಲಾಗಿತ್ತು. ಭಾರಿ ಮಳೆ ಹಿನ್ನಲೆ ಕಲಬುರಗಿಯ ಅಫಜಲಪುರ ತಾಲೂಕಿನ ಸಿದನೂರು ಗ್ರಾಮದಲ್ಲಿ ಜಮೀನಿಗೆ ತೆರಳಿದ್ದ ಮಹಿಳೆಯೊಬ್ಬರು ಸಿಡಿಲು ಬಡಿದು ಸಾವನ್ನಪ್ಪಿದ್ದರು. ಮೃತ ಮಹಿಳೆಯನ್ನು ಕಲಾವತಿ ಚಿಕ್ಕರೇವೂರು (35) ಎಂದು ಗುರುತಿಸಲಾಗಿತ್ತು. ಮತ್ತೊಬ್ಬರು ಗಂಭೀರ ಗಾಯಗೊಂಡಿದ್ದರು. ಅಲ್ಲದೆ ಕೆಲವೆಡೆ ಜಾನುವಾರುಗಳು ಸಾವನ್ನಪ್ಪಿದ್ದವು.

ದೇಶದಲ್ಲೂ ಕೆಲವೆಡೆ ಭಾರಿ ಮಳೆಯಾಗುತ್ತಿದೆ. ಮಳೆಯಿಂದಾಗಿ ಕೆಲವೆಡೆ ರಸ್ತೆಗಳು ಜಲಾವೃತವಾಗಿದ್ದು, ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿದೆ. ಜಿ- 20 ಸಭೆ ನಡೆದ ನವದೆಹಲಿಯ ಭಾರತ್​ ಮಂಟಪಕ್ಕೂ ನೀರು ನುಗ್ಗಿತ್ತು.

ಇದನ್ನೂ ಓದಿ :Karnataka Rain: ರಾಜ್ಯದಲ್ಲಿ ಭಾರಿ ಮಳೆಯ ಮುನ್ಸೂಚನೆ.. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ABOUT THE AUTHOR

...view details