ಬೆಂಗಳೂರು: ರಾಜಧಾನಿ ಸೇರಿದಂತೆ ದೇಶದೆಲ್ಲೆಡೆ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಆರೋಪದಡಿ ಲಷ್ಕರ್ -ಎ- ತೊಯ್ಬಾ ಉಗ್ರ ಸಂಘಟನೆ (ಎಲ್ಐಟಿ) ಸದಸ್ಯರಾಗಿದ್ದ ಇಬ್ಬರು ಶಂಕಿತ ಉಗ್ರರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ದೋಷಾರೋಪ ಪಟ್ಟಿ ಸಲ್ಲಿಸಿದೆ.
ಬೆಂಗಳೂರಿನ ನಿವಾಸಿ ಡಾ. ಸಬೀಲ್ ಅಹಮದ್ ಯಾನೆ ಮೋಟು ಡಾಕ್ಟರ್, ಹೈದರಾಬಾದ್ನ ಅಸಾದುಲ್ಲಾಖಾನ್ ಯಾನೆ ಅಬೂ ಸುಫಿಯಾನ್ ವಿರುದ್ಧ ಬೆಂಗಳೂರಿನ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಶೀಟ್ ಸಲ್ಲಿಸಲಾಗಿದೆ.
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಿದ್ಧರಾಗಿದ್ದ ಲಷ್ಕರ್ ಉಗ್ರರು ಬೆಂಗಳೂರು, ಹುಬ್ಬಳ್ಳಿ, ನಾಂದೇಡ್, ತೆಲಂಗಾಣ, ಹೈದರಾಬಾದ್ ಸೇರಿದಂತೆ ದೇಶದ ಹಲವು ನಗರಗಳಲ್ಲಿ ಹಿಂದೂ ಮುಖಂಡರ ಹತ್ಯೆಗೆ ಸಂಚು ರೂಪಿಸಿದ್ದರು. ಧಾರ್ಮಿಕ ಮತ್ತು ಸಾಮಾಜಿಕ ಸಾಮರಸ್ಯ ಹಾಳು ಮಾಡಲು ಪ್ಲಾನ್ ಮಾಡಿಕೊಂಡಿದ್ದರು.