ಬೆಂಗಳೂರು:ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಬಂಧಿಸಲಾಗಿದ್ದ ಇಬ್ಬರು ಶಂಕಿತ ಉಗ್ರರ ವಿರುದ್ಧ ಎನ್‌ಐಎ ವಿಶೇಷ ನ್ಯಾಯಾಲಯದಲ್ಲಿ ಚಾರ್ಜ್ಶೀಟ್ ಸಲ್ಲಿಸಲಾಗಿದೆ. ರಾಜಧಾನಿಯಲ್ಲಿ ಉಗ್ರ ಚಟುವಟಿಕೆ ನಡೆಸುವ ಹುನ್ನಾರದಿಂದ ಯುವಕರಿಗೆ ತರಬೇತಿ ನೀಡುತ್ತಿದ್ದರು ಎನ್ನಲಾದ ಈ ಇಬ್ಬರನ್ನು ಕಳೆದ ವರ್ಷದ ಅಕ್ಟೋಬರ್ ತಿಂಗಳಲ್ಲಿ ಎನ್‌ಐಎ ಬಂಧಿಸಿತ್ತು.
ತಮಿಳುನಾಡು ಮೂಲದ ಅಹ್ಮದ್ ಅಬ್ದುಲ್ ಖಾದರ್ ಮತ್ತು ಇರ್ಫಾನ್ ನಾಸಿರ್ ಬಂಧಿತರು. ಆರೋಪಿಗಳಿಬ್ಬರು ಭಯೋತ್ಪಾದನೆ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದು, ಮುಸ್ಲಿಂ ಯುವಕರನ್ನು ಈ ಕೃತ್ಯಗಳಿಗೆ ಪ್ರೇರೇಪಿಸುತ್ತಿದ್ದರು ಎಂದು ಹೇಳಲಾಗಿದೆ.