ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇತ್ತೀಚೆಗೆ ಉಗ್ರರು ಸೆರೆ ಸಿಕ್ಕ ಹಿನ್ನೆಲೆ ಎನ್ಐಎ ಅಧಿಕಾರಿಗಳು ಥಣಿಸಂದ್ರದ ಬಳಿ ಎರಡು ಮನೆಗಳ ಮೇಲೆ ದಾಳಿ ನಡೆಸಿ, ಮತ್ತಿಬ್ಬರನ್ನು ವಶಕ್ಕೆ ಪಡಿದಿದ್ದಾರೆ. ಶಂಕಿತ ಐಸಿಸ್ ಉಗ್ರರ ಮನೆ ಮೇಲೆ ದಾಳಿ ಮಾಡಿರುವ ಅಧಿಕಾರಿಗಳು, ಶೋಧಕಾರ್ಯ ಮುಂದುವರೆಸಿದ್ದಾರೆ.
ಬೆಂಗಳೂರಲ್ಲಿ ಶಂಕಿತ ಐಸಿಸ್ ಉಗ್ರರ ಮನೆ ಮೇಲೆ ಎನ್ಐಎ ದಾಳಿ: ಇಬ್ಬರು ವಶಕ್ಕೆ - ಬೆಂಗಳೂರಿನಲ್ಲಿ ಶಂಕಿತ ಐಸಿಸ್ ಉಗ್ರರ ಮನೆ ಮೇಲೆ ಎನ್ಐಎ ಅಧಿಕಾರಿಗಳ ದಾಳಿ
ಬೆಂಗಳೂರಿನಲ್ಲಿ ಎನ್ಐಎ ಅಧಿಕಾರಿಗಳು ಶಂಕಿತ ಐಸಿಸ್ ಉಗ್ರರ ಮನೆ ಮೇಲೆ ದಾಳಿ ಮಾಡಿದ್ದು, ಇಂದು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಶಂಕಿತ ಉಗ್ರರ ಮನೆ ಮೇಲೆ ಎನ್ಐಎ ಅಧಿಕಾರಿಗಳ ದಾಳಿ
ಇತ್ತೀಚೆಗೆ ಖಾಸಗಿ ಆಸ್ಪತ್ರೆಯ ವೈದ್ಯ ಡಾ. ಬ್ರೇವ್ ಎಂಬಾತನನ್ನ ಎನ್ಐಎ ಬಂಧಿಸಿತ್ತು. ನಂತರ ಈತನ ಜೊತೆ ಸಂಪರ್ಕ ಇರುವ ಇನ್ನಿಬ್ಬರನ್ನ ಬಂಧಿಸಲಾಗಿತ್ತು. ಆರೋಪಿಗಳು ಕುರಾನ್ ಎಂಬ ವಾಟ್ಸಪ್ ಗ್ರೂಪ್ ಮಾಡಿಕೊಂಡು ನಗರದ ಕೆಲ ಯುವಕರನ್ನ ಐಸಿಸ್ಗೆ ಸೇರುವಂತೆ ಪ್ರೇರೇಪಿಸುತ್ತಿದ್ದರು ಎಂಬ ವಿಚಾರ ತನಿಖೆ ವೇಳೆ ಬಯಲಾಗಿತ್ತು.
ಈ ಕುರಿತು ಶಂಕಿತ ಐಸಿಸ್ ಉಗ್ರರ ಮನೆ ಮೇಲೆ ದಾಳಿ ನಡೆಸಿದ ಎನ್ಐಎ, ಇಬ್ಬರನ್ನು ವಶಕ್ಕೆ ಪಡೆದು, ವಿಚಾರಣೆಗೆ ಒಳಪಡಿಸಿದ್ದಾರೆ.
Last Updated : Oct 28, 2020, 12:17 PM IST
TAGGED:
suspected ISIS terrorists