ಬೆಂಗಳೂರು: ಪಿಎಫ್ಐ ಸಂಘಟನೆಯಿಂದ ಭಯೋತ್ಪಾದಕ ಚಟುವಟಿಕೆಗಳಿಗೆ ಹಣ ಸಂಗ್ರಹಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಕೋಯಿಕ್ಕೋಡ್ ಹಾಗೂ ಕರ್ನಾಟಕದ ಕಲಬುರಗಿ ಜಿಲ್ಲೆಯ ಮೂರು ಸ್ಥಳಗಳಲ್ಲಿ ಎನ್ಐಎ ಇಂದು ಶೋಧಕಾರ್ಯ ನಡೆಸಿದೆ. ಶೋಧಕಾರ್ಯದಲ್ಲಿ ಡಿಜಿಟಲ್ ಸಾಧನಗಳು ಮತ್ತು ವಿವಿಧ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎನ್ಐಎ ಪ್ರಕಟಣೆಯಲ್ಲಿ ತಿಳಿಸಿದೆ.
ಪಿಎಫ್ಐನಿಂದ ಭಯೋತ್ಪಾದಕ ತರಬೇತಿ ಪ್ರಕರಣ: ಕರ್ನಾಟಕ, ಕೇರಳದಲ್ಲಿ ಎನ್ಐಎ ಶೋಧ - ಈಟಿವಿ ಭಾರತ ಕನ್ನಡ ನ್ಯೂಸ್
ಪಿಎಫ್ಐ ಸಂಘಟನೆಯಿಂದ ಭಯೋತ್ಪಾದಕ ಕೃತ್ಯಗಳಿಗೆ ಹಣ ಸಂಗ್ರಹಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮತ್ತು ಕೇರಳದಲ್ಲಿ ವಿವಿಧೆಡೆ ಶೋಧಕಾರ್ಯ ನಡೆಸಿದೆ.
ಪಿಎಫ್ಐ ಪದಾಧಿಕಾರಿಗಳು, ಸದಸ್ಯರು ಮತ್ತು ಕಾರ್ಯಕರ್ತರಿಂದ ದೇಶದ ವಿವಿಧ ಭಾಗಗಳಲ್ಲಿ ಭಯೋತ್ಪಾದಕ ಕೃತ್ಯಗಳನ್ನು ನಡೆಸಲು ಭಾರತ ಮತ್ತು ವಿದೇಶಗಳಿಂದ ಹಣ ಸಂಗ್ರಹಣೆ ಕಂಡುಬಂದ ಹಿನ್ನೆಲೆಯಲ್ಲಿ ಇದೇ ವರ್ಷ ಏಪ್ರಿಲ್‌ನಲ್ಲಿ ಎನ್ಐಎ ಪ್ರಕರಣ ದಾಖಲಿಸಿಕೊಂಡಿತ್ತು. ತನಿಖೆ ವೇಳೆ ಪಿಎಫ್ಐ ಸಂಘಟನೆಯು ಕೇರಳ, ತಮಿಳುನಾಡು, ಕರ್ನಾಟಕ, ಉತ್ತರ ಪ್ರದೇಶ ಮತ್ತು ದೆಹಲಿ ಸೇರಿದಂತೆ ದೇಶಾದ್ಯಂತ ವಿವಿಧ ಸ್ಥಳಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ತನ್ನ ಕಾರ್ಯಕರ್ತರಿಗೆ ತರಬೇತಿ ಶಿಬಿರಗಳನ್ನು ನಡೆಸಿರುವುದು ತಿಳಿದುಬಂದಿತ್ತು. ಈ ಸಂಬಂಧ ಎನ್ಐಎ ವಿವಿದೆಡೆ ದಾಳಿ ನಡೆಸಿದೆ.
ಇದನ್ನೂ ಓದಿ:ನಿಷೇಧಿತ ಪಿಎಫ್ಐ ಬ್ಯಾಂಕ್ ಖಾತೆಯಿಂದ 13 ವರ್ಷಗಳಲ್ಲಿ 20 ಸಾವಿರಕ್ಕೂ ಹೆಚ್ಚು ವಹಿವಾಟು