ಬೆಂಗಳೂರು: ನೈಜೀರಿಯಾದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಭಾನುವಾರ ತಡರಾತ್ರಿ ಚಿಕ್ಕಬಾಣಾವರದ ದ್ವಾರಕಾನಗರದಲ್ಲಿ ನಡೆದಿದೆ. ಅಲೋಶಿಯಸ್ ಓಬಿಸ್ (30) ಮೃತ ವ್ಯಕ್ತಿ.
ಬೆಂಗಳೂರಿನಲ್ಲಿ ಟೆಕ್ಸ್ ಟೈಲ್ಸ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ಅಲೋಶಿಯಸ್ ತಾವು ವಾಸವಿದ್ದ ಕಟ್ಟಡದ ಮೂರನೆಯ ಅಂತಸ್ತಿನಿಂದ ಕೆಳಕ್ಕೆ ಬಿದ್ದಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮದ್ಯ ಕುಡಿದ ಮತ್ತಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.