ಬೆಂಗಳೂರು: ಕೊರೊನಾ ಕರ್ಪ್ಯೂ ಹಿನ್ನೆಲೆ ರೂಲ್ಸ್ ಬ್ರೇಕ್ ಮಾಡಿದ ಸಾರ್ವಜನಿಕರ ವಾಹನ ಸೀಜ್ ಮಾಡಿರುವ ಬಗ್ಗೆ ಪೊಲೀಸ್ ಇಲಾಖೆ ಮಾಹಿತಿ ನೀಡಿದೆ. ಈವರೆಗೂ ಸುಮಾರು 200ಕ್ಕೂ ಹೆಚ್ಚು ವಾಹನಗಳು ಜಪ್ತಿ ಮಾಡಲಾಗಿದೆ ಎಂದು ತಿಳಿಸಿದೆ.
ಪಶ್ಚಿಮ ವಿಭಾಗದಲ್ಲಿ ಒಂದೇ ರಾತ್ರಿ 9 ಬೈಕ್ ಹಾಗೂ ಕಾರೊಂದನ್ನು ಜಪ್ತಿ ಮಾಡಲಾಗಿದ್ದು, ಒಟ್ಟು 10 ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಆಗ್ನೇಯ ವಿಭಾಗದ 15 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೂಡ ವಾಹನಗಳನ್ನು ಜಪ್ತಿ ಮಾಡಲಾಗಿದೆ.