ಇಂದಿನ ಬದಲು ನಾಳೆಯಿಂದ ನೈಟ್ ಕರ್ಫ್ಯೂ ಜಾರಿ: ಸಮಯದಲ್ಲೂ ಬದಲಾವಣೆ ಮಾಡಿದ ಸರ್ಕಾರ..!
17:42 December 23
ನಾಳೆಯಿಂದ ನೈಟ್ ಕರ್ಫ್ಯೂ
ಬೆಂಗಳೂರು: ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಇಂದಿನ ಬದಲಾಗಿ ನಾಳೆ ರಾತ್ರಿಯಿಂದ ಜಾರಿಯಾಗಲಿದೆ ಎಂದು ರಾಜ್ಯ ಸರ್ಕಾರ ನಿರ್ಧರಿಸಿದೆ.
ಇಂದಿನಿಂದ ಜಾರಿ ಮಾಡಲು ಉದ್ದೇಶಿಸಿದ್ದ ರಾತ್ರಿ ಕರ್ಫ್ಯೂ ಸಮಯ ಬದಲಾಗಿದ್ದು, ದಿನಾಂಕ 24.12.2020 ರಿಂದ ಜನವರಿ 01, 2021 ರವರೆಗೆ ರಾತ್ರಿ 11:00 ಗಂಟೆಯಿಂದ ಬೆಳಗ್ಗೆ 5:00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ ಎಂದು ಸಿಎಂ ಬಿಎಸ್ವೈ ಸ್ಪಷ್ಟಪಡಿಸಿದ್ದಾರೆ.
ರಾತ್ರಿ ಕರ್ಫ್ಯೂ ಸಂದರ್ಭದಲ್ಲಿ, ದಿನಾಂಕ 24.12.2020 ರ ರಾತ್ರಿ ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ನಡೆಯಲಿರುವ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು (ಮಿಡ್ ನೈಟ್ ಮಾಸ್) ಯಾವುದೇ ಅಡಚಣೆಯಿಲ್ಲದೇ ಅಂತರ ಕಾಪಾಡಿಕೊಂಡು ಆಚರಣೆ ಮಾಡಬಹುದು ಎಂದಿದ್ದಾರೆ.