ಬೆಂಗಳೂರು :ನಾಳೆಯಿಂದ (ಮಂಗಳವಾರ) 10 ದಿನಗಳ ಕಾಲ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಜೊತೆ ಜೊತೆಗೆ ಹಲವು ನಿರ್ಬಂಧಗಳನ್ನು ಹೇರಲಾಗಿದೆ. ಈ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ (ಬಿಎಂಆರ್ಸಿಎಲ್) ರೈಲು ಸಂಚಾರದ ವೇಳೆಗಳಲ್ಲಿ ಕೆಲ ಬದಲಾವಣೆಗಳನ್ನು ಮಾಡಿ ಪ್ರಕಟಣೆ ಹೊರಡಿಸಿದೆ.
ಡಿಸೆಂಬರ್ 28ರಂದು ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಇರುವುದರಿಂದ ರಾತ್ರಿ 10ರ ಬಳಿಕ ಜನರು ರಸ್ತೆಗಿಳಿಯದಂತೆ ಸರ್ಕಾರ ನಿರ್ಬಂಧಿಸಿದೆ. ಈ ಹಿನ್ನೆಲೆಯಲ್ಲಿ ಮೆಟ್ರೋಗೆ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸಂಸ್ಥೆ ಹೇಳಿದೆ.