ಕರ್ನಾಟಕ

karnataka

ETV Bharat / state

ಉಪಚುನಾವಣೆ: ಪ್ರಚಾರದ ಅಖಾಡಕ್ಕೆ ಇಳಿಯುವರೇ ನಿಖಿಲ್ ಕುಮಾರಸ್ವಾಮಿ? - ಕರ್ನಾಟಕ ಉಪಚುನಾವಣೆ 2020

ಉಪಚುನಾವಣೆಯಲ್ಲಿ ಜೆಡಿಎಸ್ ನಾಯಕರು ತಮ್ಮ ಅಭ್ಯರ್ಥಿಗಳ ಗೆಲುವಿಗಾಗಿ ರಾಜಕೀಯ ರಣತಂತ್ರ ಹೆಣೆಯುವಲ್ಲಿ ನಿರತರಾಗಿದ್ದಾರೆ. ಆದರೆ, ನಿಖಿಲ್ ಕುಮಾರಸ್ವಾಮಿ ಉಪಚುನಾವಣೆ ಪ್ರಚಾರದಿಂದ ದೂರ ಉಳಿದುಕೊಂಡಿರುವ ಬಗ್ಗೆ ಪಕ್ಷದಲ್ಲಿಯೇ ಚರ್ಚೆಗೆ ಕಾರಣವಾಗಿದೆ. ಈ ಎಲ್ಲಾ ಅನುಮಾನಗಳಿಗೆ ತೆರೆ ಎಳೆಯಲು ಪ್ರಚಾರದಲ್ಲಿ ತೊಡಗಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

Nikhil kumaraswamy
ನಿಖಿಲ್ ಕುಮಾರಸ್ವಾಮಿ

By

Published : Oct 24, 2020, 4:44 AM IST

ಬೆಂಗಳೂರು: ಬಹುದಿನಗಳಿಂದ ರಾಜಕೀಯದಿಂದ ದೂರ ಉಳಿದಿದ್ದ ನಟ, ಜೆಡಿಎಸ್​ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ದಸರಾ ಹಬ್ಬದ ನಂತರ ಉಪಚುನಾವಣೆ ಪ್ರಚಾರದ ಅಖಾಡಕ್ಕೆ ಇಳಿಯಲಿದ್ದಾರೆ.

ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಕೃಷ್ಣಮೂರ್ತಿ ಪರ ಮಂಗಳವಾರದಿಂದ ಪ್ರಚಾರ ನಡೆಸುವ ಸಾಧ್ಯತೆ ಇದೆ. ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಸಿಎಂ ಕುಮಾರಸ್ವಾಮಿ ಅವರು ಶಿರಾ ಹಾಗೂ ಆರ್.ಆರ್.ನಗರ ಕ್ಷೇತ್ರಗಳಲ್ಲಿ ತಮ್ಮ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ತೊಡಗಿದ್ದಾರೆ. ಜೊತೆಗೆ ಶಿರಾದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಸಹ ಈಗಾಗಲೇ ಪ್ರಚಾರ ನಡೆಸಿದ್ದಾರೆ.

ಜೆಡಿಎಸ್ ನಾಯಕರು ಅಭ್ಯರ್ಥಿಗಳ ಗೆಲುವಿಗಾಗಿ ರಾಜಕೀಯ ರಣತಂತ್ರ ಹೆಣೆಯುವಲ್ಲಿ ನಿರತರಾಗಿದ್ದಾರೆ. ಆದರೆ, ನಿಖಿಲ್ ಕುಮಾರಸ್ವಾಮಿ ಉಪಚುನಾವಣೆ ಪ್ರಚಾರದಿಂದ ದೂರ ಉಳಿದುಕೊಂಡಿರುವ ಬಗ್ಗೆ ಪಕ್ಷದಲ್ಲಿಯೇ ಚರ್ಚೆಗೆ ಕಾರಣವಾಗಿತ್ತು. ಈ ಎಲ್ಲಾ ಅನುಮಾನಗಳಿಗೆ ತೆರೆ ಎಳೆಯಲು ಪ್ರಚಾರದಲ್ಲಿ ತೊಡಗಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ ಮಂಗಳವಾರದಿಂದ ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ಪರ ಮತಯಾಚಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಆರ್.ಆರ್.ನಗರ ಕ್ಷೇತ್ರದ ಕೊಟ್ಟಿಗೆಪಾಳ್ಯ ಮತ್ತು ಲಕ್ಷ್ಮೀದೇವಿನಗರ ವಾರ್ಡ್‌ನಲ್ಲಿ ಹೆಚ್.ಡಿ. ಕುಮಾರಸ್ವಾಮಿ ಅವರ ಪ್ರಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆದರೆ, ಮಧ್ಯಾಹ್ನದಿಂದ ನಿರಂತರ ಸುರಿದ ಮಳೆಯಿಂದಾಗಿ ಪ್ರಚಾರ ಕಾರ್ಯಕ್ರಮವನ್ನು ರದ್ದುಪಡಿಸಿ ಮಂಗಳವಾರಕ್ಕೆ ಮುಂದೂಡಲಾಗಿದೆ.

ಮಂಗಳವಾರ ಕೊಟ್ಟಿಗೆ ಪಾಳ್ಯ ಮತ್ತು ಲಕ್ಷ್ಮೀದೇವಿನಗರ ವಾರ್ಡ್‌ನಲ್ಲಿ ನಡೆಯುವ ಪ್ರಚಾರ ಕಾರ್ಯಕ್ರಮದಲ್ಲಿ ನಿಖಿಲ್ ಕುಮಾರಸ್ವಾಮಿ ಸಹ ಭಾಗವಹಿಸಲಿದ್ದಾರೆ. ನಿಖಿಲ್ ಕುಮಾರಸ್ವಾಮಿ ಪ್ರಚಾರದಲ್ಲಿ ತೊಡಗಿಸಿಕೊಳ್ಳುವುದರಿಂದ ಪಕ್ಷದ ಯುವಕರನ್ನು ಹಿಡಿದಿಟ್ಟುಕೊಳ್ಳಲು ಸಾಧ್ಯವಿದೆ. ಮತಗಳು ಕೈ ತಪ್ಪುವ ಆತಂಕವು ದೂರವಾಗಲಿದ್ದು, ಯುವ ಸಮುದಾಯದ ಮತಗಳನ್ನು ಪಡೆದುಕೊಳ್ಳಲು ಸಾಧ್ಯವಿದೆ ಎಂಬ ಅಭಿಪ್ರಾಯಗಳನ್ನು ಪಕ್ಷದ ಕಾರ್ಯಕರ್ತರು ವ್ಯಕ್ತಪಡಿಸಿದ್ದಾರೆ.

ABOUT THE AUTHOR

...view details