ಕರ್ನಾಟಕ

karnataka

ETV Bharat / state

ರಾಷ್ಟ್ರೀಯ ಪಕ್ಷಗಳಿಗೆ ತಕ್ಕಪಾಠ ಕಲಿಸಿ: ಮತದಾರರಲ್ಲಿ ಮನವಿ ಮಾಡಿದ 'ಯುವರಾಜ ನಿಖಿಲ್'

ಜೆಡಿಎಸ್‌ ಪಕ್ಷಕ್ಕೆ ಸಿಕ್ಕ ಅಲ್ಪಾವಧಿಯಲ್ಲಿಯೇ ಸಮಾಜಮುಖಿ ಅಭಿವೃದ್ಧಿ ಕೆಲಸಗಳನ್ನು ಮಾಡಿದೆ. 2018 ರಲ್ಲಿ ಕುಮಾರಸ್ವಾಮಿ ಅವರಿಗೆ ಅಧಿಕಾರವನ್ನು ಕೊಟ್ಟ ಕಾಂಗ್ರೆಸ್‌, ಅಭಿವೃದ್ಧಿ ವಿಚಾರಗಳಲ್ಲಿ ಅವರ ಕೈ ಕಟ್ಟಿ ಹಾಕಿತ್ತು ಎಂದು ನಿಖಿಲ್‌ ಕುಮಾರಸ್ವಾಮಿ ತಿಳಿಸಿದರು.

nikil-kumarswamy-campaign-rr-nagara-by-election-today
ರಾಷ್ಟ್ರೀಯ ಪಕ್ಷಗಳಿಗೆ ತಕ್ಕಪಾಠ ಕಲಿಸಿ: ಮತದಾರರಲ್ಲಿ ಮನವಿ ಮಾಡಿದ 'ಯುವರಾಜ ನಿಖಿಲ್'

By

Published : Oct 29, 2020, 10:49 PM IST

ಬೆಂಗಳೂರು: ಹಣದಿಂದ ಮತಗಳನ್ನು ಖರೀದಿಸುತ್ತೇವೆ ಎಂಬ ದುರಹಂಕಾರದ ಪರಮಾವಧಿಯಲ್ಲಿ ಬಿಜೆಪಿ, ಕಾಂಗ್ರೆಸ್‌ ಪಕ್ಷಗಳಿವೆ. ನಿಮ್ಮ ಮತಗಳನ್ನು ದುರುಪಯೋಗ ಪಡಿಸಿಕೊಂಡವರಿಗೆ ತಕ್ಕ ಪಾಠ ಕಲಿಸಿ ಎಂದು ಯುವ ಜನತಾದಳದ ರಾಜ್ಯಾಧ್ಯಕ್ಷ ಹಾಗೂ ನಟ ನಿಖಿಲ್‌ ಕುಮಾರಸ್ವಾಮಿ ಮತದಾರರಲ್ಲಿ ಮನವಿ ಮಾಡಿದ್ದಾರೆ.

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಸಂಜೆ ಜೆಡಿಎಸ್‌ ಅಭ್ಯರ್ಥಿ ವಿ.ಕೃಷ್ಣಮೂರ್ತಿ ಪರ ರೋಡ್‌ ಶೋ ನಡೆಸಿ ಮಾತನಾಡಿದ ಅವರು, ಉತ್ತರ ಕರ್ನಾಟಕದಲ್ಲಿ ಪ್ರವಾಹ ಬಂದು ಜನರ ಬದುಕು ಕಷ್ಟದಲ್ಲಿದೆ. ಆದರೆ, ಸರಕಾರಕ್ಕೆ ಮಾತ್ರ ಚುನಾವಣೆಯೇ ಮುಖ್ಯವಾಗಿದೆ. ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಕರ್ನಾಟಕ ರಾಷ್ಟ್ರದಲ್ಲಿಯೇ ಎರಡನೇ ಸ್ಥಾನಕ್ಕೆ ಬಂದು ನಿಂತಿದೆ ಇದಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದರು.

ಜೆಡಿಎಸ್‌ ಪಕ್ಷಕ್ಕೆ ಸಿಕ್ಕ ಅಲ್ಪಾವಧಿಯಲ್ಲಿಯೇ ಸಮಾಜಮುಖಿ ಅಭಿವೃದ್ಧಿ ಕೆಲಸಗಳನ್ನು ಮಾಡಿದೆ. 2018 ರಲ್ಲಿ ಕುಮಾರಸ್ವಾಮಿಯವರಿಗೆ ಅಧಿಕಾರವನ್ನು ಕೊಟ್ಟ ಕಾಂಗ್ರೆಸ್‌, ಅಭಿವೃದ್ಧಿ ವಿಚಾರಗಳಲ್ಲಿ ಅವರ ಕೈಯನ್ನು ಕಟ್ಟಿ ಹಾಕಿತ್ತು. ದೇಶದ ಇತಿಹಾಸದಲ್ಲಿ ಯಾವುದೇ ಮುಖ್ಯಮಂತ್ರಿ ರೈತರ ಸಂಪೂರ್ಣ ಸಾಲ ಮನ್ನಾ ಮಾಡಿದ್ದಿಲ್ಲ. ಅದನ್ನು ಕುಮಾರಸ್ವಾಮಿಯವರು ಮಾಡಿ ತೋರಿಸಿದ್ದಾರೆ ಎಂದರು.

ಯುವಕರು ರಾಜಕೀಯಕ್ಕೆ ಬರುವ ಮುಂಚೆ ಯೋಚನೆ ಮಾಡಬೇಕಾದ ಪರಿಸ್ಥಿತಿ ಉಂಟಾಗಿದೆ. ಬೆಳಗ್ಗೆ ಒಂದು ಪಕ್ಷ, ಮಧ್ಯಾಹ್ನ ಒಂದು ಪಾರ್ಟಿ, ರಾತ್ರಿ ಒಂದು ಪಕ್ಷ ಅಂತಾ ಬದಲಾಯಿಸುತ್ತಾರೆ. ನಾಳೆ ಬೆಳಗ್ಗೆ ಅವರಿಗೆ ನೀವು ಯಾವ ಪಕ್ಷ ಎಂದು ಕೇಳಿದರೆ, ಅವರು ಯೋಚನೆ ಮಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದರು. ನನ್ನ ಮತ್ತು ಮುನಿರತ್ನ ಸಂಬಂಧ ಕೇವಲ ಸಿನಿಮಾಗೆ ಮಾತ್ರ, ಸುಖಾಸುಮ್ಮನೆ ಗೊಂದಲ ಸೃಷ್ಟಿಸಬೇಡಿ ಎಂದು ಪುನರುಚ್ಛರಿಸಿದರು.

ಜೆಡಿಎಸ್‌ ಅಭ್ಯರ್ಥಿ ವಿ.ಕೃಷ್ಣಮೂರ್ತಿ ಮಾತನಾಡಿ, ಮುನಿರತ್ನ ಮೊದಲೇ ಸಿನಿಮಾ ನಿರ್ಮಾಪಕರು, ಅವರಿಗೆ ಕಣ್ಣೀರು ಹಾಕೋದು ಗೊತ್ತು, ಕಣ್ಣೀರು ಹಾಕಿಸೋದು ಗೊತ್ತು. ಕಾಂಗ್ರೆಸ್‌ನವರಿಗೆ ಎಲೆಕ್ಷನ್‌ ಬಂದಾಗ ಜಾತಿ ಮೇಲೆ ಪ್ರೀತಿ ಬಂದಿದೆ. ನಾನು ಕೂಡ ಒಕ್ಕಲಿಗನೇ ಆದರೆ, ಎಲ್ಲಿಯೂ ಒಕ್ಕಲಿಗ ಎಂಬ ಟ್ರಂಪ್‌ ಕಾರ್ಡ್‌ ಬಳಸಿಲ್ಲ. ರಾಷ್ಟ್ರೀಯ ಪಕ್ಷಗಳ ಕಿತ್ತಾಟ ನೋಡುತ್ತಿರುವ ಜನ ನನ್ನನ್ನು ಗೆಲ್ಲಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ಮಾಜಿ ವಿಧಾನ ಪರಿಷತ್‌ ಸದಸ್ಯ ಟಿ.ಎ.ಶರವಣ ಮಾತನಾಡಿ, ಬಿಹಾರ ಚುನಾವಣೆಯಲ್ಲಿ ಬಿಜೆಪಿ ನಾಯಕರು ಹೇಳುತ್ತಾರೆ. ನಮ್ಮ ಸರ್ಕಾರವನ್ನು ಅಧಿಕಾರಕ್ಕೆ ತಂದರೆ ಕೊರೊನಾ ಲಸಿಕೆಯನ್ನು ಉಚಿತವಾಗಿ ನೀಡುತ್ತೀವಿ ಎಂದು ನಿಮ್ಮ ಸರ್ಕಾರವನ್ನು ಅಧಿಕಾರಕ್ಕೆ ತರದಿದ್ದರೆ ನಮ್ಮ ಜನರನ್ನು ಸಾಯಿಸುತ್ತೀರಾ ಎಂದು ಬಿಜೆಪಿ ನಾಯಕರನ್ನು ಪ್ರಶ್ನಿಸಿದರು.

ABOUT THE AUTHOR

...view details