ನವದೆಹಲಿ:ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ 2023ನೇ ಸಾಲಿನ ನ್ಯಾಷನಲ್ ರ್ಯಾಂಕಿಂಗ್ ಫ್ರೇಮ್ವರ್ಕ್ (ಎನ್ಐಆರ್ಎಫ್) ಶ್ರೇಯಾಂಕ ಪಟ್ಟಿಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್(ಐಐಎಸ್ಸಿ) ದೇಶದ ನಂಬರ್ 1 ಶಿಕ್ಷಣ ಸಂಸ್ಥೆ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ. ಅಲ್ಲದೇ, ಎಲ್ಲ ವಿಭಾಗಗಳ ಶ್ರೇಯಾಂಕದಲ್ಲಿ 2ನೇ ಸ್ಥಾನದಲ್ಲಿದೆ.
ಇಂದು ದೆಹಲಿಯಲ್ಲಿ ಮಾಧ್ಯಮಗೋಷ್ಟಿ ನಡೆಸಿ ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕ ಪಟ್ಟಿ ಬಿಡುಗಡೆ ಮಾಡಿದ ಕೇಂದ್ರ ಶಿಕ್ಷಣ ಮತ್ತು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಡಾ. ರಾಜ್‌ಕುಮಾರ್ ರಂಜನ್ ಸಿಂಗ್ ಅವರು ಈ ಮಾಹಿತಿ ಹಂಚಿಕೊಂಡರು. ನ್ಯಾಷನಲ್ ರ್ಯಾಂಕಿಂಗ್ ಫ್ರೇಮ್ವರ್ಕ್ (ಎನ್ಐಆರ್ಎಫ್) ಶ್ರೇಯಾಂಕದಲ್ಲಿ ತಮಿಳುನಾಡಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್ಸಿ) ದೇಶದಲ್ಲಿಯೇ ಮೊದಲ ಸ್ಥಾನವನ್ನು ಉಳಿಸಿಕೊಂಡಿದೆ.
ಟಾಪ್ ಯೂನಿವರ್ಸಿಟಿ ಶ್ರೇಯಾಂಕ:ಎನ್ಐಆರ್ಎಫ್ ಶ್ರೇಯಾಂಕದ ದೇಶದ ಟಾಪ್ 10 ಯೂನಿವರ್ಸಿಟಿಗಳಲ್ಲಿ ಬೆಂಗಳೂರಿನ ಇಂಡಿಯನ್ಸ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಶಿಕ್ಷಣ ಸಂಸ್ಥೆ ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಜವಾಹರ್ಲಾಲ್ ನೆಹರೂ ವಿಶ್ವವಿದ್ಯಾಲಯ ಎರಡನೇ, ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ಮೂರನೇ ಸ್ಥಾನದಲ್ಲಿದೆ. ಹೈದರಾಬಾದ್ ವಿವಿಗೆ ಕೊನೆಯ ಸ್ಥಾನ ಸಿಕ್ಕಿದೆ.
ಒಟ್ಟಾರೆ ವಿಭಾಗದ ಶ್ರೇಯಾಂಕ:ದೇಶದ ಎಲ್ಲ ಶಿಕ್ಷಣ ಸಂಸ್ಥೆಗಳ ಗುಣಮಟ್ಟ, ಸೌಲಭ್ಯಗಳ ಪಟ್ಟಿಯಲ್ಲಿ ತಮಿಳುನಾಡಿನ ಐಐಎಸ್ಸಿ ಮೊದಲ ಸ್ಥಾನವನ್ನು ಉಳಿಸಿಕೊಂಡಿದೆ. ಇದು ಕಳೆದ ಬಾರಿಯೂ ಅಗ್ರಸ್ಥಾನದಲ್ಲಿತ್ತು. ಬೆಂಗಳೂರಿನ ಐಐಎಸ್ಸಿ ಇದರಲ್ಲಿ 2 ನೇ ಸ್ಥಾನದಲ್ಲಿದ್ದರೆ, ದೆಹಲಿ ಐಐಎಸ್ಸಿ ಮೂರನೇ ಶ್ರೇಯ ಪಡೆದಿದೆ. ದೆಹಲಿಯ ಇನ್ನೊಂದು ಶಿಕ್ಷಣ ಸಂಸ್ಥೆಯಾದ ಜವಾಹರ್ಲಾಲ್ ನೆಹರೂ ವಿವಿ ಕೊನೆಯ ಶ್ರೇಯಾಂಕದಲ್ಲಿದೆ.