ಕರ್ನಾಟಕ

karnataka

ETV Bharat / state

KIAL​​​ನಲ್ಲಿ 108 ಅಡಿ ಎತ್ತರದ ಕೆಂಪೇಗೌಡ ಪುತ್ಥಳಿ ನಿರ್ಮಾಣ: ನಿರ್ಮಲಾನಂದನಾಥ ಸ್ವಾಮೀಜಿ ಭೇಟಿ, ಪರಿಶೀಲನೆ - ಕೆಐಎಎಲ್​​ಗೆ ಭೇಟಿ ನೀಡಿದ ನಿರ್ಮಲಾನಂದನಾಥ ಸ್ವಾಮೀಜಿ

ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪುತ್ಥಳಿ ನಿರ್ಮಾಣ ಕಾರ್ಯ ನಡೆಯುತ್ತಿದೆ. ಪ್ರತಿಮೆಯ ಕಾಲುಗಳು ದೆಹಲಿಯಿಂದ ಏರ್ ಪೋರ್ಟ್​ಗೆ ಬಂದಿದ್ದು, ಅದರ ವೀಕ್ಷಣೆ ನಡೆಸಲು ಇಂದು ಆದಿಚುಂಚನಗಿರಿ ಮಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ ಭೇಟಿ ನೀಡಿದ್ದರು.

nirmalanandanatha swamiji visits kial airport
ಕೆಐಎಎಲ್​​ಗೆ ಭೇಟಿ ನೀಡಿದ ನಿರ್ಮಲಾನಂದನಾಥ ಸ್ವಾಮೀಜಿ

By

Published : Jul 12, 2021, 8:51 PM IST

ದೇವನಹಳ್ಳಿ/ಬೆಂಗಳೂರು:ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ 108 ಅಡಿ ಎತ್ತರದ ಪುತ್ಥಳಿ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, ಸ್ಥಳಕ್ಕೆ ಆದಿಚುಂಚನಗಿರಿ ಮಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೆಐಎಎಲ್​​ಗೆ ಭೇಟಿ ನೀಡಿದ ನಿರ್ಮಲಾನಂದನಾಥ ಸ್ವಾಮೀಜಿ

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (BIAL) ವತಿಯಿಂದ ಕೆಂಪೇಗೌಡರ 108 ಅಡಿ ಎತ್ತರದ ಪುತ್ಥಳಿ ನಿರ್ಮಾಣ ಕಾರ್ಯ ನಡೆಯುತ್ತಿದೆ. ಪ್ರತಿಮೆಯ ಕಾಲುಗಳು ದೆಹಲಿಯಿಂದ ಏರ್ ಪೋರ್ಟ್​ಗೆ ಬಂದಿದ್ದು, ಅದರ ವೀಕ್ಷಣೆ ನಡೆಸಲು ಇಂದು ಆದಿಚುಂಚನಗಿರಿ ಮಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ ಭೇಟಿ ನೀಡಿದ್ದರು. ಕಳೆದ ವರ್ಷ ಕೆಂಪೇಗೌಡರ ಜಯಂತಿಯಂದು ಕೆಂಪೇಗೌಡರ ಪುತ್ಥಳಿ ನಿರ್ಮಾಣ ಕಾರ್ಯಕ್ಕೆ ಶಂಕುಸ್ಥಾಪನೆ ಮಾಡಲಾಗಿತು. ಸದ್ಯ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, 2022ಕ್ಕೆ ಪುತ್ಥಳಿ ಲೋಕಾರ್ಪಣೆಗೊಳ್ಳಲಿದೆ.

ಕೆಂಪೇಗೌಡ ಪುತ್ಥಳಿ ನಿರ್ಮಾಣ ಕಾರ್ಯ

ಏರ್​​ಪೋರ್ಟ್ ಮುಂಭಾಗದಲ್ಲಿ ಕೆಂಪೇಗೌಡರ ಪುತ್ಥಳಿ ನಿರ್ಮಾಣವಾಗುತ್ತಿದೆ. ಪುತ್ಥಳಿ ಜತೆಗೆ ಪಾರ್ಕ್ ಸಹ ನಿರ್ಮಾಣವಾಗಲಿದೆ. ದೇಶ ವಿದೇಶದಿಂದ ಬರುವ ಪ್ರಯಾಣಿಕರಿಗೆ ಇದು ಆಕರ್ಷಣೆಯ ಕೇಂದ್ರವಾಗಲಿದೆ.

ಪುತ್ಥಳಿ ನಿರ್ಮಾಣ ಕಾರ್ಯ ವೀಕ್ಷಣೆ

ABOUT THE AUTHOR

...view details