ಬೆಂಗಳೂರು: ಬಿಹಾರ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ನಿತೀಶ್ ಕುಮಾರ್ ಅವರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶುಭ ಕೋರಿದ್ದಾರೆ.
ಬಿಹಾರ ಸಿಎಂ ಆಗಿ ನಿತೀಶ್ ಕುಮಾರ್; ಸಿಎಂ ಬಿಎಸ್ವೈ ಅಭಿನಂದನೆ - CM BSY Tweet 2020
ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ನಿತೀಶ್ ಕುಮಾರ್ ಅವರಿಗೆ ಸಿಎಂ ಟ್ವೀಟ್ ಮಾಡಿ ಶುಭ ಕೋರಿದ್ದಾರೆ. 7ನೇ ಬಾರಿ ಪ್ರಮಾಣ ವಚನ ಸ್ವೀಕಾರ ಮಾಡಿದ ನಿತೀಶ್ ಕುಮಾರ್ ಸತತ 4ನೇ ಅವದಿಗೆ ಸಿಎಂ ಆಗಿದ್ದು ಅವರೊಂದಿಗೆ ಸಂಪುಟದ ಸೇರಿದ ಉಪ ಮುಖ್ಯಮಂತ್ರಿಗಳಿಗೂ ಶುಭ ಕೋರಿ ಟ್ವೀಟ್ ಮಾಡಿದ್ದಾರೆ.
ಬಿಹಾರ ರಾಜ್ಯದ ಮುಖ್ಯಮಂತ್ರಿ ಆಗಿ ಏಳನೇ ಬಾರಿ ಪ್ರಮಾಣ ವಚನ ಸ್ವೀಕಾರ ಮಾಡಿದ ನಿತೀಶ್ ಕುಮಾರ್ ಸತತ ನಾಲ್ಕನೇ ಅವಧಿಗೆ ಮುಖ್ಯಮಂತ್ರಿ ಆಗಿದ್ದು ಅವರಿಗೆ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ. ಅದೇ ರೀತಿ ನಿತೀಶ್ ಸಂಪುಟದಲ್ಲಿ ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ತಾರಕಿಶೋರ್ ಪ್ರಸಾದ್ ಮತ್ತು ರೇಣು ದೇವಿ ಅವರಿಗೂ ಸಿಎಂ ಯಡಿಯೂರಪ್ಪ ಶುಭ ಕೋರಿ ಟ್ವೀಟ್ ಮಾಡಿದ್ದಾರೆ.
ಬಿಹಾರದಲ್ಲಿ ಎನ್‌ಡಿಎ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬಂದಿದ್ದು ನಿತೀಶ್ ಕುಮಾರ್ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಪುಟ ಸಹೋದ್ಯೋಗಿಗಳು ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಬಿಜೆಪಿ ಪದಾಧಿಕಾರಿಗಳು, ನಾಯಕರು ಶುಭ ಕೋರಿ ಟ್ವೀಟ್ ಮಾಡಿದ್ದಾರೆ.