ಬೆಂಗಳೂರು:ನಿರೀಕ್ಷೆಯಂತೆ ಅಖಾಡಕ್ಕಿಳಿದಿರುವ ಗವರ್ನರ್ ವಜುಭಾಯಿ ವಾಲಾ ಅವರು ಸಿಎಂ ಕುಮಾರಸ್ವಾಮಿಯವರ ಅಧಿಕಾರಕ್ಕೆ ಕಡಿವಾಣ ಹಾಕಿದ್ದಾರೆ.
ಯಾವುದೇ ಆಡಳಿತಾತ್ಮಕ ತೀರ್ಮಾನ ಕೈಗೊಳ್ಳುವಂತಿಲ್ಲ: ಸರ್ಕಾರಕ್ಕೆ ವಾಲಾ ಸೂಚನೆ - news kannada
ರಾಜ್ಯ ರಾಜಕೀಯಕ್ಕೆ ಇಳಿದಿರುವ ರಾಜ್ಯಪಾಲಾ ವಜುಭಾಯಿ ವಾಲಾ, ಆಡಳಿತಾತ್ಮಕ ತೀರ್ಮಾನ ಕೈಗೊಳ್ಳದಂತೆ ಮುಖ್ಯಮಂತ್ರಿ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಆದೇಶ ಹೊರಡಿಸಿದ್ದಾರೆ.
ರಾಜ್ಯಪಾಲಾ ವಜುಭಾಯ್ ವಾಲಾ
ಯಾವುದೇ ಆಡಳಿತಾತ್ಮಕ ತೀರ್ಮಾನ ಕೈಗೊಳ್ಳುವಂತಿಲ್ಲ ಎಂದು ಸಿಎಂ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.
ಸರ್ಕಾರದ ಮೂವರು ಸಚಿವರು ರಾಜೀನಾಮೆ ನೀಡಿರುವುದರಿಂದ ಯಾವುದೇ ಮಹತ್ವದ ನಿರ್ಧಾರ ಕೈಗೊಳ್ಳುವಂತಿಲ್ಲ ಎಂದು ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ. ಅಷ್ಟೇ ಅಲ್ಲ ಸಿಎಂ ನಡೆಸುತ್ತಿರುವ ತುರ್ತು ಸಂಪುಟ ಸಭೆ ಬಗ್ಗೆ ಸ್ಪಷ್ಟನೆ ಕೇಳಿದ್ದಾರೆ. ಈ ಮೂಲಕ ಸರ್ಕಾರದ ಕಾರ್ಯಚಟುವಟಿಕೆಗಳ ಮೇಲೆ ರಾಜ್ಯಪಾಲರು ಹದ್ದಿನ ಕಣ್ಣಿಟ್ಟಿದ್ದಾರೆ.