ಬೆಂಗಳೂರು:ಎಸಿಬಿ ರದ್ದುಪಡಿಸಿ ಹೈಕೋರ್ಟ್ ನೀಡಿದ ತೀರ್ಪನ್ನು ತಾವು ಗೌರವಿಸುವುದಾಗಿ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಲೋಕಾಯುಕ್ತಕ್ಕೆ ಹೆಚ್ಚಿನ ಅಧಿಕಾರ ನೀಡಬೇಕೆಂದು ತೀರ್ಪು ನೀಡಿದ ಹೈಕೋರ್ಟ್ ಆದೇಶದ ವಿರುದ್ಧ ತಾವು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಹೋಗುವುದಿಲ್ಲವೆಂದು ಅವರು ಸ್ಪಷ್ಟಪಡಿಸಿದ್ದಾರೆ.
ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದಾಗ 2016ರಲ್ಲಿ ಲೋಕಾಯುಕ್ತಕ್ಕೆ ಇದ್ದ ಅಧಿಕಾರ ಮೊಟಕುಗೊಳಿಸಿ ಎಸಿಬಿ ರಚಿಸಿ ಭ್ರಷ್ಟಾಚಾರ ಪ್ರಕರಣಗಳ ತನಿಖೆ ಜವಾಬ್ದಾರಿ ನೀಡಿದ್ದರು. 2018ರಲ್ಲಿ ಇದನ್ನು ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿತ್ತು. ಇತ್ತೀಚೆಗೆ ನೀಡಿದ ತೀರ್ಪಿನಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಬಿ ವೀರಪ್ಪ ನೇತೃತ್ವದ ವಿಭಾಗೀಯ ಪೀಠವು ಎಸಿಬಿ ರದ್ದುಪಡಿಸಿ ಲೋಕಾಯುಕ್ತಕ್ಕೆ ಪರಮಾಧಿಕಾರ ನೀಡಿತ್ತು.
ಎಸಿಬಿ ರದ್ದತಿ ವಿರುದ್ದ ಸುಪ್ರೀಂ ಕೋರ್ಟ್ ಮೊರೆ ಹೋದ ರಾಜ್ಯ ಸರ್ಕಾರ: ರಾಜ್ಯದಲ್ಲಿನ ಎಸಿಬಿ ರದ್ದು ಮಾಡಿ ಹೈಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧ ಕನಕರಾಜು ಎಂಬುವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಭ್ರಷ್ಟಾಚಾರ ನಿಗ್ರಹ ದಳದ(ಎಸಿಬಿ) ಮುಂದೆ ಇದ್ದ ಎಲ್ಲಾ ಭ್ರಷ್ಟಾಚಾರ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಬೇಕೆಂದು ಆದೇಶಿಸಿರುವುದನ್ನು ಕನಕರಾಜು ಪ್ರಶ್ನಿಸಿದ್ದಾರೆ.