ಬೆಂಗಳೂರು: ಪ್ರಚೋದನಕಾರಿ ಹೇಳಿಕೆ ನೀಡಿದ್ದ ಪ್ರಕರಣ ಸಂಬಂಧ ನಡೆದ ವಿಚಾರಣೆಗೆ ಸಂಸದ ನಳೀನ್ ಕುಮಾರ್ ಕಟೀಲ್ ಗೈರಾಗಿದ್ದ ಹಿನ್ನೆಲೆಯಲ್ಲಿ ಅವರ ವಿರುದ್ಧ ಇಲ್ಲಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ.
ಸಂಸದ ನಳೀನ್ ಕುಮಾರ್ ಕಟೀಲ್ ಗೆ ಜಾಮೀನು ರಹಿತ ವಾರೆಂಟ್! - ಜಾಮೀನು ರಹಿತ ವಾರೆಂಟ್
ಪ್ರಚೋದನಕಾರಿ ಹೇಳಿಕೆ ನೀಡಿದ್ದ ಪ್ರಕರಣ ಸಂಬಂಧ ನಡೆದ ವಿಚಾರಣೆಗೆ ಸಂಸದ ನಳೀನ್ ಕುಮಾರ್ ಕಟೀಲ್ ಗೈರಾಗಿದ್ದ ಹಿನ್ನೆಲೆಯಲ್ಲಿ ಅವರ ವಿರುದ್ಧ ಇಲ್ಲಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ.
ಬಿಜೆಪಿ ಸಂಸದ ನಳೀನ್ ಕುಮಾರ್ ಕಟೀಲ್
ಮಂಗಳೂರಿನಲ್ಲಿ ಕಾರ್ತಿಕ್ ಎಂಬುವರ ಕೊಲೆ ಪ್ರಕರಣದಲ್ಲಿ ಪ್ರತಿಭಟನೆ ನಡೆಸಿ ಕೋಣಾಜಿ ಪೊಲೀಸ್ ಸರ್ಕಲ್ ಇನ್ಸ್ಸ್ಪೆಕ್ಟರ್ ಉದ್ದೇಶಿಸಿ ಆರೋಪಿಗಳನ್ನು ಹತ್ತು ದಿನದೊಳಗಾಗಿ ಬಂಧಿಸದಿದ್ದರೆ, ಇಡೀ ಜಿಲ್ಲೆಗೆ ಬೆಂಕಿ ಇಡುವುದಾಗಿ ಆವೇಶಭರಿತ ಮಾತುಗಳ ಮೂಲಕ ಭಯದ ವಾತಾವರಣ ಮೂಡಿಸಿದ್ದರು. ಈ ಸಂಬಂಧ ನ್ಯಾಯಾಲಯ ಹಲವು ಬಾರಿ ಹಾಜರಾಗುವಂತೆ ಸಮನ್ಸ್ ಜಾರಿ ನೀಡಿದ್ದರೂ ನಳೀನ್ ಕುಮಾರ್ ಹಾಜರಾಗಿರಲಿಲ್ಲ.
ಈ ಹಿನ್ನೆಲೆಯಲ್ಲಿ ನ್ಯಾ.ರಾಮಚಂದ್ರ ಡಿ.ಹುದ್ದಾರ್ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿ, ವಿಚಾರಣೆಯನ್ನು ಇದೇ ತಿಂಗಳ 28ಕ್ಕೆ ಮೂಂದೂಡಿದ್ದಾರೆ.
Last Updated : Aug 6, 2019, 8:19 AM IST