ಬೆಂಗಳೂರು:ದೆಹಲಿ ವಿಧಾನಸಭೆ ಚುನಾವಣೆ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆಯಾಗಿದ್ದು, ಇದರಲ್ಲಿ ರಾಜ್ಯದಿಂದ ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸಚಿವ ಡಿಕೆಶಿ ಹಾಗೂ ಕೇಂದ್ರದ ಮಾಜಿ ಸಚಿವರುಗಳಿಗೆ ಅವಕಾಶ ಸಿಗದಿರುವುದು ಅಚ್ಚರಿಗೆ ಕಾರಣವಾಗಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಆಗಿರುವ ಕೆ ಸಿ ವೇಣುಗೋಪಾಲ್ ಮೂಲಕ ಬಿಡುಗಡೆಯಾಗಿರುವ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಎಐಸಿಸಿ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್, ನಾಯಕರಾದ ಪ್ರಿಯಾಂಕ ಗಾಂಧಿ, ಗುಲಾಮ್ ನಬಿ ಆಜಾದ್, ನವಜೋತ್ ಸಿಂಗ್ ಸಿದ್ದು, ಜ್ಯೋತಿರಾದಿತ್ಯ ಸಿಂಧ್ಯಾ, ಸಚಿನ್ ಪೈಲೆಟ್, ರಣದೀಪ್ ಸಿಂಗ್ ಸುರ್ಜೆವಾಲಾ ಸೇರಿದಂತೆ 40 ಸದಸ್ಯರ ಪಟ್ಟಿ ಬಿಡುಗಡೆ ಮಾಡಿದ್ದು ಇದರಲ್ಲಿ ಅಖಿಲ ಭಾರತ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ ವಿ ಶ್ರೀನಿವಾಸ್ ಹೊರತುಪಡಿಸಿದರೆ ಉಳಿದ್ಯಾವ ನಾಯಕರಿಗೂ ಅವಕಾಶ ಸಿಕ್ಕಿಲ್ಲ.