ಕರ್ನಾಟಕ

karnataka

ETV Bharat / state

ಅಧಿವೇಶನದ ಅವಧಿ ಕಡಿತ ಬೇಡ, ಪೂರ್ವ ನಿಗದಿಯಂತೆ ಮಾ.31ರವರೆಗೆ ಕಲಾಪ: ಒಮ್ಮತದ ನಿರ್ಧಾರ - Bengaluru

ಈಗಾಗಲೇ ನಿಗದಿಯಾಗಿರುವಂತೆ ಮಾರ್ಚ್ 31ರವರೆಗೆ ಬಜೆಟ್ ಅಧಿವೇಶನದ‌ ಕಲಾಪ ನಡೆಸಲು ಕಲಾಪ ಸಲಹಾ ಸಮಿತಿ ಸಭೆಯಲ್ಲಿ ನಿರ್ಧರಿಸಲಾಯಿತು.

Budget session
ಮಾ.31ರವರೆಗೆ ಬಜೆಟ್ ಅಧಿವೇಶನ

By

Published : Mar 9, 2020, 4:07 PM IST

ಬೆಂಗಳೂರು: ಬಜೆಟ್ ಅಧಿವೇಶನದ ಅವಧಿ ಕಡಿತ ಬೇಡ. ಈಗಾಗಲೇ ನಿಗದಿಯಾಗಿರುವಂತೆ ಮಾರ್ಚ್ 31ರವರೆಗೆ ಬಜೆಟ್ ಅಧಿವೇಶನದ‌ ಕಲಾಪ ನಡೆಸಬೇಕು ಎಂದು ಕಲಾಪ ಸಲಹಾ ಸಮಿತಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಮಾ.31ರವರೆಗೆ ಬಜೆಟ್ ಅಧಿವೇಶನ

ಒಂದು ತಿಂಗಳ ಸುದೀರ್ಘ ಅವಧಿಯ ಕಲಾಪದಿಂದ ಕ್ಷೇತ್ರದ ಕಡೆ ಗಮನ ಕೊಡಲು ಸಾಧ್ಯವಾಗದ ಕುರಿತು ಕೆಲ ಸದಸ್ಯರು ಆತಂಕ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕಲಾಪ ಸಲಹಾ ಸಮಿತಿ ಸಭೆ ನಡೆಸಲಾಯಿತು. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಸಭೆಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಹೆಚ್.ಕೆ.ಪಾಟೀಲ್ ಸೇರಿದಂತೆ ಕಲಾಪ ಸಲಹಾ ಸಮಿತಿ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಸದನದ ಕಲಾಪದ ದಿನಗಳಲ್ಲಿ ಕಡಿತ ಮಾಡುವುದಕ್ಕೆ ಸಭೆಯಲ್ಲಿ ವಿರೋಧ ವ್ಯಕ್ತವಾಗಿದ್ದು, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕೂಡ ಕಲಾಪದ ದಿನಗಳ ಕಡಿತಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರು ತಿಂಗಳಾಂತ್ಯದವರೆಗೂ ಕಲಾಪ ನಡೆಸಲು ಒಲವು ತೋರಿದ ಹಿನ್ನೆಲೆಯಲ್ಲಿ ಕಲಾಪದಲ್ಲಿ ಯಾವುದೇ ಬದಲಾವಣೆ ಮಾಡದೆ ಮಾರ್ಚ್ 31ರವರೆಗೆ ಪೂರ್ವ ನಿಗದಿಯಂತೆ ನಡೆಸಲು ನಿರ್ಧಾರ ಕೈಗೊಳ್ಳಲಾಯಿತು.

ABOUT THE AUTHOR

...view details