ಬೆಂಗಳೂರು :ಬೇಸಿಗೆ ಕಾಲದಲ್ಲೂ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಕೆಲಸದ ಸಮಯದಲ್ಲಿ ಬದಲಾವಣೆ ಇಲ್ಲದೇ ಯಥಾಸ್ಥಿತಿ ಮುಂದುವರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕಲಬುರಗಿ ಹಾಗೂ ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ ಜಿಲ್ಲೆಗಳಿಗೆ ಬೇಸಿಗೆ ಕಾಲದಲ್ಲಿ ಸರ್ಕಾರಿ ಕಚೇರಿ ಕೆಲಸದ ವೇಳೆ ಬದಲಾವಣೆ ಮಾಡುವ ಅಗತ್ಯವಿಲ್ಲ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ತಿಳಿಸಿದೆ.
ಬೇಸಿಗೆಯಲ್ಲೂ ಉತ್ತರ ಕರ್ನಾಟಕದ ಸರ್ಕಾರಿ ಕಚೇರಿ ಕೆಲಸದ ಸಮಯದಲ್ಲಿ ಯಥಾಸ್ಥಿತಿ - ಉತ್ತರ ಕರ್ನಾಟಕದ ಕೆಲಸದ ಸಮಯ ಯಥಾಸ್ಥಿತಿ
ಬೇಸಿಗೆ ಸಂದರ್ಭದಲ್ಲಿ ಬಿಸಿಲಿನ ತಾಪ ಹೆಚ್ಚಾಗುವ ಹಿನ್ನೆಲೆ ಈ ಹಿಂದೆ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಕೆಲಸದ ವೇಳೆ ಬದಲಾವಣೆ ಮಾಡಲಾಗುತ್ತಿತ್ತು. ಆದರೆ, ಈ ಬಾರಿ ಕೆಲಸದ ಸಮಯದ ವಿನಾಯಿತಿ ನೀಡಲಾಗುತ್ತಿಲ್ಲ..
![ಬೇಸಿಗೆಯಲ್ಲೂ ಉತ್ತರ ಕರ್ನಾಟಕದ ಸರ್ಕಾರಿ ಕಚೇರಿ ಕೆಲಸದ ಸಮಯದಲ್ಲಿ ಯಥಾಸ್ಥಿತಿ No changes in North Karnataka Govt office timings in Summer](https://etvbharatimages.akamaized.net/etvbharat/prod-images/768-512-11264789-thumbnail-3x2-hrs.jpg)
ಸರ್ಕಾರಿ ಕಚೇರಿ ಕೆಲಸದ ಸಮಯದಲ್ಲಿ ಯಥಾಸ್ಥಿತಿ
ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಈ ಸಂಬಂಧ ಇಲಾಖೆಯಿಂದ ಪತ್ರ ಬರೆಯಲಾಗಿದೆ. ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆ ಕಲಬುರಗಿ ಹಾಗೂ ಬೆಳಗಾವಿ ವಿಭಾಗದ ಜಿಲ್ಲೆಗಳಲ್ಲಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಕಚೇರಿ ವೇಳೆ ಬದಲಾವಣೆ ಮಾಡುವ ಅಗತ್ಯವಿಲ್ಲ ಎಂಬ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಬೇಸಿಗೆ ಸಂದರ್ಭದಲ್ಲಿ ಬಿಸಿಲಿನ ತಾಪ ಹೆಚ್ಚಾಗುವ ಹಿನ್ನೆಲೆ ಈ ಹಿಂದೆ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಕೆಲಸದ ವೇಳೆ ಬದಲಾವಣೆ ಮಾಡಲಾಗುತ್ತಿತ್ತು. ಆದರೆ, ಈ ಬಾರಿ ಕೆಲಸದ ಸಮಯದ ವಿನಾಯಿತಿ ನೀಡಲಾಗುತ್ತಿಲ್ಲ.
TAGGED:
No changes office timings