ಕರ್ನಾಟಕ

karnataka

ETV Bharat / state

ಸಂಪುಟದ ಸದಸ್ಯರಲ್ಲಿ ಯಾವುದೇ ಗೊಂದಲ, ಸಮನ್ವಯದ ಕೊರತೆ ಇಲ್ಲ: ಸಚಿವ ಸೋಮಶೇಖರ್ - ಸಹಕಾರ ಸಚಿವ ಎಸ್.ಟಿ. ಸೋಮಶೇಖರ್

ಸರ್ಕಾರ ಜನರ ಪ್ರಾಣ ರಕ್ಷಣೆಗೆ ಏನೆಲ್ಲಾ ಮಾಡಬೇಕು ಎಂಬ ಬಗ್ಗೆ ಕಾನೂನುಬದ್ಧವಾಗಿ ಮಾಡುತ್ತಿದೆ. ಇಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ. ಇದಕ್ಕೆ 550 ಕೋಟಿ ರೂ. ಮಾತ್ರ ಖರ್ಚಾಗಿದೆ ಎಂದು ಎಸ್.ಟಿ.ಸೋಮಶೇಖರ್ ತಿಳಿಸಿದರು.

Minister S.T. Somashekar
ಸಚಿವ ಎಸ್.ಟಿ. ಸೋಮಶೇಖರ್

By

Published : Jul 14, 2020, 5:12 PM IST

ಬೆಂಗಳೂರು:ಸಚಿವ ಸಂಪುಟ ಸದಸ್ಯರಲ್ಲಿ ಯಾವುದೇ ಗೊಂದಲ ಇಲ್ಲ, ಸಮನ್ವಯದ ಕೊರತೆಯೂ ಇಲ್ಲ. ಎಲ್ಲರೂ ಒಗ್ಗಟ್ಟಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ವಿರೋಧ ಪಕ್ಷದವರು ಸುಮ್ಮನೆ ವಿರೋಧ ಮಾಡಬೇಕು ಎಂದು ಮಾಡುತ್ತಿದ್ದಾರೆ. ಇಲ್ಲಿ ಯಾರಲ್ಲೂ ಸಮನ್ವಯದ ಕೊರತೆ ಕಾಡುತ್ತಿಲ್ಲ. ಎಲ್ಲಾ ಸಚಿವರೂ ಜಿಲ್ಲಾ ಪ್ರವಾಸ ಕೈಗೊಂಡು ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರೆ. ಎಲ್ಲರೂ ಉತ್ತಮವಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ ಎಂದರು.

ಸರ್ಕಾರ ಜನರ ಪ್ರಾಣ ರಕ್ಷಣೆಗೆ ಏನೆಲ್ಲಾ ಮಾಡಬೇಕು ಎಂಬ ಬಗ್ಗೆ ಕಾನೂನುಬದ್ಧವಾಗಿ ಮಾಡುತ್ತಿದೆ. ಇಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ. ಇದಕ್ಕೆ 550 ಕೋಟಿ ರೂ. ಮಾತ್ರ ಖರ್ಚಾಗಿದೆ. ಸುಮ್ಮನೆ 1200 ಕೋಟಿ ರೂ.‌ ಖರ್ಚಾಗಿದೆ ಎಂದು ಹೇಳುತ್ತಾರೆ. ವಿಧಾನಸೌಧಕ್ಕೆ ಬರಲಿ, ಪರಿಶೀಲನೆ ನಡೆಸಲಿ ಎಂದು ಕಾಂಗ್ರೆಸ್ ನಾಯಕರ ಆರೋಪಕ್ಕೆ ತಿರುಗೇಟು ನೀಡಿದರು.

ರಾಜ್ಯಾದ್ಯಂತ ಲಾಕ್​ಡೌನ್ ಮಾಡುವ ಇಂಗಿತ ರಾಜ್ಯ ಸರ್ಕಾರಕ್ಕಿಲ್ಲ. ಪರಿಸ್ಥಿತಿಯ ತೀವ್ರತೆಯನ್ನು ನೋಡಿಕೊಂಡು ಆಯಾ ಜಿಲ್ಲೆಗಳ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಬಹುದು. ಲಾಕ್​ಡೌನ್ ವಿಷಯದಲ್ಲಿ ಸಂಪೂರ್ಣ ಅಧಿಕಾರವನ್ನು ಈಗಾಗಲೇ ಮುಖ್ಯಮಂತ್ರಿಗಳು ನೀಡಿದ್ದಾರೆ ಎಂದು ಹೇಳಿದರು.

ABOUT THE AUTHOR

...view details