ಬೆಂಗಳೂರು:ರಾಜ್ಯಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರಿಗೆ ಬಿಜೆಪಿ ಪಕ್ಷ ಬೆಂಬಲ ಕೊಡುವುದರ ಬಗ್ಗೆ ಕೇಂದ್ರದ ನಾಯಕರು ತೀರ್ಮಾನ ಮಾಡುತ್ತಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.
ರಾಜ್ಯಸಭಾ ಚುನಾವಣೆಯಲ್ಲಿ ದೇವೇಗೌಡರಿಗೆ ಬೆಂಬಲ ವಿಚಾರ: ಸಚಿವ ಆರ್.ಅಶೋಕ್ ಹೇಳಿದ್ದು ಹೀಗೆ
ರಾಜ್ಯಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರಿಗೆ ಬಿಜೆಪಿ ಪಕ್ಷ ಬೆಂಬಲಿಸುವ ವಿಚಾರವಾಗಿ ಸಚಿವ ಆರ್.ಅಶೋಕ್ ಪ್ರತಿಕ್ರಿಯೆ ನೀಡಿದರು.
ನಗರದಲ್ಲಿ ಇಂದು ಮಾತನಾಡಿದ ಅವರು, ದೇವೇಗೌಡರಿಗೆ ಬೆಂಬಲ ಕೊಡುವುದರ ಬಗ್ಗೆ ಕೇಂದ್ರದ ನಾಯಕರು ತೀರ್ಮಾನ ಮಾಡುತ್ತಾರೆ. ಇದರಲ್ಲಿ ನಮ್ಮದೇನೂ ಪಾತ್ರವಿಲ್ಲ. ಹಾಗೆಯೇ ಸುಧಾಮೂರ್ತಿಯವರಿಗೆ ಬೆಂಬಲ ನೀಡುವ ವಿಚಾರದ ಬಗ್ಗೆಯೂ ಪ್ರಸ್ತಾವನೆ ಇಲ್ಲ. ಈ ಬಗ್ಗೆ ಇಂದು ಸಂಜೆ ಸಭೆ ನಡೆಯಲಿದೆ ಎಂದರು.
ನಮ್ಮ ಪಕ್ಷದಿಂದ ಪ್ರಭಾಕರ್ ಕೋರೆ, ಲೆಹರ್ ಸಿಂಗ್, ರಮೇಶ್ ಕತ್ತಿ ಹಾಗೂ ಪ್ರಕಾಶ್ ಶೆಟ್ಟಿ ಸೇರಿ ನಾಲ್ವರು ಆಕಾಂಕ್ಷಿಗಳಿದ್ದಾರೆ. ಯಾರಿಗೆ ಅದೃಷ್ಟ ಇರುತ್ತದೋ ಅವರು ರಾಜ್ಯಸಭೆಯ ಅಭ್ಯರ್ಥಿಯಾಗಲಿದ್ದಾರೆ. ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ರಾಜ್ಯ ಬಿಜೆಪಿ ಪಕ್ಷದಲ್ಲಿ ಯಾವುದೇ ಗೊಂದಲ, ಅಸಮಾಧಾನ ಇಲ್ಲ ಎಂದರು.