ಕರ್ನಾಟಕ

karnataka

ETV Bharat / state

ಬೆಳಗಾವಿಯಲ್ಲಿ ಕೊರೊನಾ ಪ್ರಕರಣ ದಾಖಲಾಗಿಲ್ಲ: ರಮೇಶ್ ಜಾರಕಿಹೊಳಿ - ಕೊರೊನಾಗೆ ಮುಂಜಾಗರೂಕತೆ ಕ್ರಮ

ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ವೈರಸ್ ಬಾರದಂತೆ ಮುಂಜಾಗರೂಕತಾ ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ತಿಳಿಸಿದ್ದಾರೆ.

ರಮೇಶ್ ಜಾರಕಿಹೊಳಿ
ರಮೇಶ್ ಜಾರಕಿಹೊಳಿ

By

Published : Mar 13, 2020, 11:46 PM IST

ಬೆಂಗಳೂರು:ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಕೊರೊನಾ ಪ್ರಕರಣ ದಾಖಲಾಗಿಲ್ಲ. ಈ ಬಗ್ಗೆ ಮುಂಜಾಗರೂಕತಾ ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ತಡೆಗೆ ಇಲಾಖಾವಾರು ಕ್ರಮ ತೆಗೆದುಕೊಂಡಿದ್ದೇವೆ. ಬಸ್ ನಿಲ್ದಾಣ, ಏರ್ ಪೋರ್ಟ್ ನಲ್ಲೂ ಕ್ರಮ ತೆಗೆದುಕೊಂಡಿದ್ದೇವೆ ಎಂದರು.

ಜಲಾಶಯದ ನೀರಿನ ಮಟ್ಟಗಳ ಕುರಿತು ಮಾತನಾಡಿ, ರಾಜ್ಯದ ಜಲಾಶಯಗಳಲ್ಲಿ ಸಾಕಷ್ಟು ನೀರಿನ ಪ್ರಮಾಣವಿದೆ. ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುವುದಿಲ್ಲ. ಕುಡಿಯುವ ನೀರಿಗೆ ಸರ್ಕಾರ ಪ್ರಮುಖ ಅದ್ಯತೆ ಕೊಡಲಿದೆ ಎಂದು ತಿಳಿಸಿದರು.

ABOUT THE AUTHOR

...view details