ಬೆಂಗಳೂರು :ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರು/ತತ್ಸಮಾನ ಗ್ರೂಪ್ ಬಿ ವೃಂದದ ವರ್ಗಾವಣಾ ಕೌನ್ಸಿಲಿಂಗ್ ನಡೆಯುತ್ತಿದೆ. ಆದರೆ, ಕೌನ್ಸಿಲಿಂಗ್ ನಡೆಯುವ ಸ್ಥಳದಲ್ಲಿ ಕೋವಿಡ್ ಯಾವುದೇ ನಿಯಮ ಪಾಲನೆ ಆಗುತ್ತಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ. ಬೆಂಗಳೂರಿನ ಶಿಕ್ಷಕರ ಸದನದಲ್ಲಿ ಪ್ರತಿದಿನ ಬೆಳಗ್ಗೆ 9 ರಿಂದ ಶಿಕ್ಷಕರ ಕೌನ್ಸಿಲಿಂಗ್ ನಡೆಯುತ್ತಿದೆ.
ಕಳೆದ ಡಿಸೆಂಬರ್ 16ರಿಂದ ಮುಖ್ಯ ಶಿಕ್ಷಕರು, ಸಹ ಶಿಕ್ಷಕರಿಗೆ ಕೌನ್ಸಿಲಿಂಗ್ ನಡೆದಿದೆ. ಇಂದು ಸಹ ಶಿಕ್ಷಕರು, ದೈಹಿಕ ಶಿಕ್ಷಕರು ಹಾಗೂ ವಿಶೇಷ ಶಿಕ್ಷಕರಿಗೆ ಕೌನ್ಸಿಲಿಂಗ್ ನಡೆಯುತ್ತಿದೆ. ಶಿಕ್ಷಕರು ಕೊರೊನಾ ಭೀತಿಯಲ್ಲೇ ಪ್ರಕ್ರಿಯೆಗೆ ಭಾಗಿಯಾಗುವಂತಾಗಿದೆ.