ಕರ್ನಾಟಕ

karnataka

ETV Bharat / state

ಕೀಟಗಳ ಹಾವಳಿ ಭಯ ಬೇಡ, ಸರ್ಕಾರ ಮುನ್ನೆಚ್ಚರಿಕಾ ಕ್ರಮ ವಹಿಸಲಿದೆ: ಬಿ.ಸಿ. ಪಾಟೀಲ್ - government will take precautionary measures

ಕೀಟಗಳ ಹಾವಳಿ ರಾಜ್ಯಕ್ಕೆ ಬರದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವ ಸಲುವಾಗಿ, ನಾಳೆ ಕೃಷಿ ಅಧಿಕಾರಿಗಳು, ಕೃಷಿ ವಿಶ್ವವಿದ್ಯಾಲಯ ಸಂಶೋಧಕರು ಹಾಗೂ ಕೀಟ ಶಾಸ್ತ್ರಜ್ಞರೊಂದಿಗೆ ಸಭೆ ನಡೆಸಲಾಗುತ್ತದೆ. ಹಾಗಾಗಿ ರೈತರು ಕೀಟ ಹಾವಳಿ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್​ ಹೇಳಿದ್ದಾರೆ.

ಬಿ.ಸಿ ಪಾಟೀಲ್
ಬಿ.ಸಿ ಪಾಟೀಲ್

By

Published : May 27, 2020, 9:01 PM IST

ಬೆಂಗಳೂರು: ಮಧ್ಯಪ್ರದೇಶ ಸೇರಿದಂತೆ ಇತರ ರಾಜ್ಯಗಳಲ್ಲಿ ರೈತರ ಜಮೀನುಗಳಿಗೆ ಬಾಧಿಸಿರುವ ಕೀಟಗಳ ಹಾವಳಿ ರಾಜ್ಯಕ್ಕೆ ಬಾರದಂತೆ ಸರ್ಕಾರ ಅಗತ್ಯ ಮುನ್ನೆಚ್ಚರಿಕೆ ವಹಿಸಿದೆ. ರೈತರು ಆತಂಕಕ್ಕೆ ಒಳಗಾಗಬಾರದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಮನವಿ ಮಾಡಿದ್ದಾರೆ.

ಕೃಷಿ ಸಚಿವ ಬಿ.ಸಿ. ಪಾಟೀಲ್​

ಕೀಟಗಳ ಹಾವಳಿ ರಾಜ್ಯಕ್ಕೆ ಬರದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವ ಸಲುವಾಗಿ, ನಾಳೆ ಕೃಷಿ ಅಧಿಕಾರಿಗಳು, ಕೃಷಿ ವಿಶ್ವವಿದ್ಯಾಲಯ ಸಂಶೋಧಕರು ಹಾಗೂ ಕೀಟ ಶಾಸ್ತ್ರಜ್ಞರೊಂದಿಗೆ ಸಭೆ ನಡೆಸಲಾಗುತ್ತದೆ. ಕೀಟಗಳು ಬಾರದಂತೆ ಯಾವ ರೀತಿ ಜಾಗ್ರತೆ ವಹಿಸಬೇಕು ಎಂದು ನಿರ್ಧರಿಸಲಾಗುತ್ತದೆ ಎಂದರು.

ಹಾಗಾಗಿ ಇತರ ರಾಜ್ಯಗಳಲ್ಲಿ ಕೀಟ ಹಾವಳಿ ಕಂಡು ರೈತರು ಯಾವುದೇ ಕಾರಣಕ್ಕೂ ಆತಂಕಕ್ಕೊಳಗಾಗಬಾರದು ಎಂದು ಕೃಷಿ ಸಚಿವರು ಪತ್ರಿಕಾ ಹೇಳಿಕೆ ಮೂಲಕ ಮನವಿ ಮಾಡಿದ್ದಾರೆ.

ABOUT THE AUTHOR

...view details