ಬೆಂಗಳೂರು: ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿಗೊಳಿಸುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಸ್ಪಷ್ಟಪಡಿಸಿದ್ದಾರೆ.
'ರಾಜ್ಯದಲ್ಲಿ ಮತ್ತೆ ಲಾಕ್ಡೌನ್' ಕುರಿತ ಗಾಳಿ ಸುದ್ದಿಗಳಿಗೆ ತೆರೆ ಎಳೆದ ಸಚಿವ ಜೆ.ಸಿ ಮಾಧುಸ್ವಾಮಿ - lockdown in karnataka
ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿ ಮಾಡುವಂತಹ ಯಾವುದೇ ಚಿಂತನೆ ಇಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆಸಿ ಮಾಧುಸ್ವಾಮಿ ಸ್ಪಷ್ಟೀಕರಣ ನೀಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಸಚಿವರು, ಮಾಧ್ಯಮಗಳಲ್ಲಿ ಬರುತ್ತಿರುವ ಕೊರೊನಾ ನಿಯಂತ್ರಣಕ್ಕಾಗಿ ಲೋಕಲ್ ಲಾಕ್ ಡೌನ್ ಸಾಧ್ಯತೆಯ ವಿಷಯವನ್ನು ಅಲ್ಲಗಳೆದರು. ರಾಜ್ಯದಲ್ಲಿ ಮತ್ತೊಮ್ಮೆ ಲಾಕ್ ಡೌನ್ ಜಾರಿಗೊಳಿಸುವುದಿಲ್ಲ. ಅಂತಹ ಯಾವುದೇ ಚಿಂತನೆಯನ್ನು ಸರ್ಕಾರ ನಡೆಸಿಲ್ಲ ಎಂದರು.
ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಕೂಡ ಲಾಕ್ ಡೌನ್ ಜಾರಿ ವಿಷಯವನ್ನು ತಳ್ಳಿ ಹಾಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಚರ್ಚೆಯ ವೇಳೆ ಲಾಕ್ ಡೌನ್ ಜಾರಿ ವಿಷಯ ಪ್ರಸ್ತಾಪವೇ ಆಗಿಲ್ಲ. ಆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಯಾವ ಸೂಚನೆಯನ್ನೂ ನೀಡಿಲ್ಲ. ರಾಜ್ಯ ಸರ್ಕಾರದ ಮುಂದೆಯೂ ಲಾಕ್ ಡೌನ್ ಪ್ರಸ್ತಾವನೆ ಇಲ್ಲ ಎಂದು ಸ್ಪಷ್ಟಪಡಿಸಿದರು.