ಬೆಂಗಳೂರು:ಇನ್ಮುಂದೆ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವವರಿಗೆ ಕೋವಿಡ್ ಆರ್ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯವಲ್ಲ ಎಂದು ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯಾಗಿದ್ದ ಕಾರಣ ರಾಜ್ಯಕ್ಕೆ ಪ್ರವೇಶ ಮಾಡುವವರಿಗೆ ಆರ್ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ತೋರಿಸಿ ಬರಬೇಕಿತ್ತು. ಆದರೆ ಇನ್ಮುಂದೆ ಈ ಆದೇಶಕ್ಕೆ ವಿನಾಯಿತಿ ನೀಡಲಾಗಿದೆ.
ಮಹಾರಾಷ್ಟ್ರದಿಂದ ಬರುವವರಿಗೆ ಆರ್ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯವಲ್ಲ.. ಆದರೆ ಇವೆಲ್ಲ ಬೇಕೇಬೇಕು! - ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವವರಿಗೆ ಆರ್ಟಿಪಿಸಿಆರ್ ವರದಿ ಕಡ್ಡಾಯವಲ್ಲ
ಈ ಹಿಂದೆ ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯಾಗಿದ್ದ ಕಾರಣ ರಾಜ್ಯಕ್ಕೆ ಪ್ರವೇಶ ಮಾಡುವವರಿಗೆ ಆರ್ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ತೋರಿಸಿ ಬರಬೇಕಿತ್ತು. ಆದರೆ ಇನ್ಮುಂದೆ ಈ ಆದೇಶಕ್ಕೆ ವಿನಾಯಿತಿ ನೀಡಲಾಗಿದೆ.
ಮಹಾರಾಷ್ಟ್ರದಿಂದ ಬರುವವರಿಗೆ ಆರ್ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯವಲ್ಲ.. ಆದರೆ ಇವೆಲ್ಲ ಅಗತ್ಯ
ವಿಮಾನ ನಿಲ್ದಾಣ, ರೈಲ್ವೆ, ರಸ್ತೆ ಸಾರಿಗೆ ಮತ್ತು ವೈಯಕ್ತಿಕ ವಾಹನದ ಮೂಲಕ ಬರುವವರು ಆರ್ಟಿಪಿಸಿಆರ್ ನೆಗೆಟಿವ್ ಪರೀಕ್ಷಾ ವರದಿ ನೀಡುವ ಆದೇಶವನ್ನು ಹಿಂಪಡೆಯಲಾಗಿದೆ. ಆದರೆ ಮಹಾರಾಷ್ಟ್ರದಿಂದ ಬರುವವರು ಎರಡು ಡೋಸ್/ಪೂರ್ಣ ಡೋಸ್ ವ್ಯಾಕ್ಸಿನೇಷನ್ ಪ್ರಮಾಣ ಪತ್ರ ಹೊಂದಿರಬೇಕು. ಇದನ್ನು ಕಟ್ಟುನಿಟ್ಟಾಗಿ ಜಾರಿಯೊಂದಿಗೆ ಮುಂದುವರಿಸಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ:ಪದವಿ, ವಿವಿ, ಡಿಪ್ಲೋಮಾ ಕಾಲೇಜುಗಳಿಗೆ ಫೆ.16ರವರೆಗೆ ರಜೆ ಘೋಷಿಸಿದ ಸರ್ಕಾರ