ಕರ್ನಾಟಕ

karnataka

ETV Bharat / state

ಸ್ವಯಂ ಸೇವಕರ ಸಹಾಯ - ಸೇವೆಗೆ ಅಡ್ಡಿಯಿಲ್ಲ: ಹೈಕೋರ್ಟ್‌ಗೆ ಸರ್ಕಾರದ ಸ್ಪಷ್ಟನೆ

ಸ್ವಯಂ ಸೇವಕರು ಮತ್ತು ಸಂಸ್ಥೆಗಳು ನಿರಾಶ್ರಿತರಿಗೆ ನೆರವು ನೀಡುವುದಕ್ಕೆ ತಗಾದೆ ತೆಗೆದಿದ್ದ ಕಲ್ಬುರ್ಗಿ ಜಿಲ್ಲಾಡಳಿತದ ಕ್ರಮ ಪ್ರಶ್ನಿಸಿ "ನೋ ಯುವರ್ ರೈಟ್ಸ್ ಅಸೋಸಿಯೇಷನ್' ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠಕ್ಕೆ ಸರ್ಕಾರ ಈ ಮಾಹಿತಿ ನೀಡಿದೆ.

By

Published : Apr 18, 2020, 11:15 PM IST

ಸ್ವಯಂ ಸೇವಕರ ಸಹಾಯ-ಸೇವೆಗೆ ಅಡ್ಡಿಯಿಲ್ಲ : ಹೈಕೋರ್ಟ್‌ಗೆ ಸರ್ಕಾರದ ಸ್ಪಷ್ಟನೆ

ಬೆಂಗಳೂರು : ಲಾಕ್‍ಡೌನ್ ಅವಧಿಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಊಟ, ವಸತಿ ಸೇರಿದಂತೆ ಜೀವನಾವಶ್ಯಕ ವಸ್ತುಗಳನ್ನು ಪೂರೈಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಮತ್ತು ವ್ಯಕ್ತಿಗಳ ಕೆಲಸಕ್ಕೆ ಅಡ್ಡಿ ಮಾಡಿಲ್ಲ. ಬದಲಿಗೆ ಇವರೊಂದಿಗೆ ಸಮನ್ವಯ ಹೊಂದಲು ಪೂರಕವಾಗಿ ಜಿಲ್ಲಾ ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಲು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿ ಸುತ್ತೋಲೆ ಹೊರಡಿಸಿದ್ದೇವೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‍ಗೆ ತಿಳಿಸಿದೆ.

ಸ್ವಯಂ ಸೇವಕರು ಮತ್ತು ಸಂಸ್ಥೆಗಳು ನಿರಾಶ್ರಿತರಿಗೆ ನೆರವು ನೀಡುವುದಕ್ಕೆ ತಗಾದೆ ತೆಗೆದಿದ್ದ ಕಲ್ಬುರ್ಗಿ ಜಿಲ್ಲಾಡಳಿತದ ಕ್ರಮ ಪ್ರಶ್ನಿಸಿ "ನೋ ಯುವರ್ ರೈಟ್ಸ್ ಅಸೋಸಿಯೇಷನ್' ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠಕ್ಕೆ ಸರ್ಕಾರ ಈ ಮಾಹಿತಿ ನೀಡಿದೆ.

ಅರ್ಜಿ ವಿಚಾರಣೆ ವೇಳೆ, ಸರ್ಕಾರದ ಪರ ವಕೀಲರು ಲಿಖಿತ ಮಾಹಿತಿ ಸಲ್ಲಿಸಿ, ಸ್ವಯಂ ಸೇವಾ ಸಂಸ್ಥೆಗಳು ಮತ್ತು ದಾನಿ ವ್ಯಕ್ತಿಗಳ ಚಟುವಟಿಕೆಗಳ ಸಮನ್ವಯಕ್ಕೆ ಸಂಬಂಧಿಸಿದಂತೆ ಪಂಚಾಯತ್‍ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿ ಸುತ್ತೋಲೆ ಹೊರಡಿಸಿದ್ದಾರೆ. ಹೈಕೋರ್ಟ್ ನಿರ್ದೇಶನದಂತೆ ಲಾಕ್‍ಡೌನ್ ಅವಧಿಯಲ್ಲಿ ಸಂಕಷ್ಟದಲ್ಲಿರುವ ಜನರಿಗೆ ವಿಶೇಷವಾಗಿ ವಲಸೆ ಕಾರ್ಮಿಕರು, ನಿರ್ಗತಿಕರು, ಭಿಕ್ಷುಕರಿಗೆ ಆಹಾರ ಪೂರೈಸುವ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಸ್ವಯಂ ಸೇವಾ ಸಂಸ್ಥೆಗಳು ಮತ್ತು ವ್ಯಕ್ತಿಗಳ ಜೊತೆಗೆ ಸಮನ್ವಯ ಸಾಧಿಸಲು ಪ್ರತಿ ಜಿಲ್ಲೆಯಲ್ಲಿ ಒಬ್ಬ ನೋಡಲ್ ಅಧಿಕಾರಿ ನೇಮಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಅದೇ ರೀತಿ, ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಆಸಕ್ತ ವ್ಯಕ್ತಿಗಳು ನೋಂದಾಯಿಸಿಕೊಂಡು ತಮ್ಮ ಚಟುವಟಿಕೆಗಳನ್ನು ಹಂಚಿಕೊಳ್ಳಲು "ಸಂಕಲ್ಪ್' ಹೆಸರಿನ ವೆಬ್‌ ಪೋರ್ಟಲ್ ಆರಂಭಿಸಲಾಗಿದೆ ಎಂದು ಸರ್ಕಾರದ ಪರ ವಕೀಲರು ಮಾಹಿತಿ ನೀಡಿದರು.

ABOUT THE AUTHOR

...view details