ಕರ್ನಾಟಕ

karnataka

ETV Bharat / state

ಕರ್ಫ್ಯೂ ಸಮಯದಲ್ಲಿ ಪೊಲೀಸ್ ಇಲಾಖೆಯಿಂದ ಯಾವುದೇ ಪಾಸ್ ವಿತರಿಸುತ್ತಿಲ್ಲ: ಕಮಿಷನರ್​ ಸ್ಪಷ್ಟನೆ

ಸರ್ಕಾರದ ಆದೇಶದಲ್ಲಿ ವಿನಾಯಿತಿ ನೀಡಿರುವ ಸೇವೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರು ತಮ್ಮ ಸ್ಥಳಗಳಿಗೆ ಗುರುತಿನ ಚೀಟಿ ಅಥವಾ ಸಮರ್ಥನೀಯ ದಾಖಲಾತಿಗಳನ್ನು ಹಾಜರುಪಡಿಸಿ ಪ್ರಯಾಣಿಸಬಹುದು. ಆದರೆ ಈ ಸಮಯದಲ್ಲಿ ಯಾರಿಗೂ ಪೊಲೀಸ್​ ಇಲಾಖೆಯಿಂದ ಪಾಸ್​ ವಿತರಿಸುತ್ತಿಲ್ಲ ಎಂದು ಬೆಂಗಳೂರು ನಗರ ಪೊಲೀಸ್​ ಆಯುಕ್ತರು ಸ್ಪಷ್ಟಪಡಿಸಿದ್ದಾರೆ.

-police-commissioner
ಪೊಲೀಸ್ ಆಯುಕ್ತರ ಸ್ಪಷ್ಟನೆ

By

Published : Apr 28, 2021, 9:35 PM IST

ಬೆಂಗಳೂರು: ಕೊರೊನಾ ಕರ್ಫ್ಯೂ ಪಾಸ್ ಸಂಬಂಧ ಮಂಗಳವಾರ ರಾತ್ರಿಯಿಂದ ಸಾಕಷ್ಟು ಗೊಂದಲ ಏರ್ಪಟ್ಟಿದೆ. ಸಾರ್ವಜನಿಕರು ಪೊಲೀಸ್ ಆಯುಕ್ತರಿಗೆ ಫೇಸ್​​ಬುಕ್, ಟ್ವಿಟ್ಟರ್ ಮತ್ತು ಇತರ ಸಾಮಾಜಿಕ ಜಾಲತಾಣದ ಮೂಲಕ ಸಾಕಷ್ಟು ಪ್ರಶ್ನೆಗಳನ್ನು ಕೇಳಿದ್ದರು.

ಈ ವಿಷಯವಾಗಿ ನಗರ ಪೊಲೀಸ್ ಆಯುಕ್ತರ ಕಚೇರಿ ಪ್ರಕಟಣೆ ಹೊರಡಿಸಿದ್ದು ದಿ:28-4-2021 ರಿಂದ 12-5-2021ರ ವರೆಗೆ ವಿಧಿಸಿರುವ ಕರ್ಫ್ಯೂ ಅವಧಿಯಲ್ಲಿ ಬೆಂಗಳೂರು ನಗರ ಪೊಲೀಸ್ ಇಲಾಖೆ ವತಿಯಿಂದ ಯಾವುದೇ ರೀತಿಯ ಪಾಸ್‌ಗಳನ್ನು ಯಾವುದೇ ಉದ್ದೇಶಕ್ಕಾಗಿ ವಿತರಿಸಲಾಗುತ್ತಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೊಲೀಸ್ ಆಯುಕ್ತರ ಸ್ಪಷ್ಟನೆ

ಸರ್ಕಾರದ ಆದೇಶದಲ್ಲಿ ವಿನಾಯಿತಿ ನೀಡಿರುವ ಸೇವೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರು ತಮ್ಮ ಸ್ಥಳಗಳಿಗೆ ಗುರುತಿನ ಚೀಟಿ ಅಥವಾ ಸಮರ್ಥನೀಯ ದಾಖಲಾತಿಗಳನ್ನು ಹಾಜರುಪಡಿಸಿ ಪ್ರಯಾಣಿಸಬಹುದೆಂದು ಸ್ಪಷ್ಟಪಡಿಸಿದ್ದಾರೆ.

For All Latest Updates

ABOUT THE AUTHOR

...view details