ಬೆಂಗಳೂರು:ರಾಷ್ಟ್ರೀಯ ಪೌರತ್ವ ಕಾಯ್ದೆ ಜಾರಿ ಕುರಿತಂತೆ ದಿನೇ ದಿನೇ ದೇಶದಲ್ಲಿ ಪರ-ವಿರೋಧ ಚರ್ಚೆ ನಡೆಯುತ್ತಿದೆ. ಉತ್ತರ ಭಾರತದಲ್ಲಿ ಅಂತೂ ಪ್ರತಿಭಟನೆ ಕಾವು ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪೌರತ್ವ ವಿಚಾರಕ್ಕಾಗಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಹಾಗೂ ಶೈಕ್ಷಣಿಕ ಸಂಸ್ಥೆಗಳಿಗೆ ನೊಟಿಸ್ ನೀಡಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.
ಪೌರತ್ವ ವಿಷಯಕ್ಕಾಗಿ ನಗರದಲ್ಲಿ ಇತ್ತೀಚೆಗೆ ಕೆಲವು ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿರುವುದು ಕಂಡುಬಂದಿದೆ. ಕಾನೂನುಬಾಹಿರವಾಗಿ ಪ್ರತಿಭಟನೆ ಮಾಡಿರುವವರ ವಿಡಿಯೋ ಚಿತ್ರೀಕರಣದ ಮಾಡಲಾಗಿದೆ. ಅಂತಹವರಿಗೆ ನೊಟಿಸ್ ನೀಡಲಾಗುವುದು ಎಂದರು.