ಕರ್ನಾಟಕ

karnataka

ETV Bharat / state

ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು ಪ್ರಾರಂಭಿಸುವ ಪ್ರಸ್ತಾವ ಇಲ್ಲ: ಶಶಿಕಲಾ ಜೊಲ್ಲೆ

ಮುಸ್ಲಿಂ ಮಹಿಳೆಯರಿಗಾಗಿಯೇ ಪ್ರತ್ಯೇಕ ಕಾಲೇಜು ಪ್ರಾರಂಭಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಯಾವುದೇ ಪ್ರಸ್ತಾವನೆಗಳು ಇಲ್ಲ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

Shashikala Jolle
ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ

By

Published : Dec 1, 2022, 1:37 PM IST

ಬೆಂಗಳೂರು:ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು ಪ್ರಾರಂಭಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ. ಅಂತಹ ಕಡತವೂ ಬಂದಿಲ್ಲ ಎಂದು ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟಪಡಿಸಿದ್ದಾರೆ.

ಇಂದು ಪತ್ರಿಕಾ ಹೇಳಿಕೆ ಮೂಲಕ ಸ್ಪಷ್ಟೀಕರಣ ನೀಡಿರುವ ಸಚಿವರು, ಮುಸ್ಲಿಂ ಮಹಿಳೆಯರಿಗಾಗಿಯೇ ಪ್ರತ್ಯೇಕ ಕಾಲೇಜು ಪ್ರಾರಂಭಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಯಾವುದೇ ಪ್ರಸ್ತಾವನೆಗಳು ಇಲ್ಲ. ಕಾಲೇಜುಗಳ ಪ್ರಾರಂಭದ ಬಗ್ಗೆ ವಕ್ಫ್‌ ಬೋರ್ಡ್‌ ಅಧ್ಯಕ್ಷರ ಹೇಳಿಕೆಯು ಅವರ ವೈಯಕ್ತಿಕ ಹೇಳಿಕೆಯಾಗಿದೆ.

ಶಶಿಕಲಾ ಜೊಲ್ಲೆ ಪತ್ರಿಕಾ ಪ್ರಕಟಣೆ

ಈ ವಿಷಯದ ಕುರಿತು ನಾನು ಈಗಾಗಲೇ ವಕ್ಫ್‌ ಬೋರ್ಡ್‌ ಅಧ್ಯಕ್ಷರ ಜೊತೆ ಮಾತನಾಡಿದ್ದು, ಇದರ ಬಗ್ಗೆ ಎದ್ದಿರುವ ಊಹಾಪೋಹಗಳಿಗೆ ಸ್ಪಷ್ಟನೆ ನೀಡುವಂತೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ:ಅಂಜನಾದ್ರಿ ಅಭಿವೃದ್ಧಿಗೆ ನಾವು ಬದ್ದ: ಸಚಿವೆ ಶಶಿಕಲಾ ಜೊಲ್ಲೆ

ABOUT THE AUTHOR

...view details