ಕರ್ನಾಟಕ

karnataka

ETV Bharat / state

ಜೆಡಿಎಸ್‌ನೊಂದಿಗೆ ಮೈತ್ರಿ ಪ್ರಶ್ನೆಯೇ ಇಲ್ಲ, ನಾವು 146 ಸ್ಥಾನ ಗೆಲ್ಲುತ್ತೇವೆ: ಡಿ.ಕೆ.ಶಿವಕುಮಾರ್ - ಎಕ್ಸಿಟ್ ಪೋಲ್

ಈ ಬಾರಿ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ, ನಾವೇ ಸರ್ಕಾರ ರಚಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Shivakumar
ಡಿ ಕೆ ಶಿವಕುಮಾರ್

By

Published : May 11, 2023, 6:54 AM IST

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ನಿನ್ನೆ(ಬುಧವಾರ) ಮತದಾನ ನಡೆದಿದೆ. ಇದೀಗ ಎಲ್ಲರ ಚಿತ್ತ ಮೇ 13 ರ ಫಲಿತಾಂಶದತ್ತ ನೆಟ್ಟಿದೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಸಿಎಂ ಆಕಾಂಕ್ಷಿ ಡಿ.ಕೆ. ಶಿವಕುಮಾರ್​ ಎಕ್ಸಿಟ್ ಪೋಲ್ (ಮತದಾನೋತ್ತರ ಸಮೀಕ್ಷೆ) ಲೆಕ್ಕಾಚಾರದ ಬಗ್ಗೆ ಪ್ರತಿಕ್ರಿಯಿಸಿ, "ಪೋಸ್ಟ್ ಪೋಲ್ ಸಮೀಕ್ಷೆಗಳಲ್ಲಿ ತೋರಿಸಿರುವ ಅಂಕಿಅಂಶಗಳ ಬಗ್ಗೆ ನನಗೆ ನಂಬಿಕೆ ಇಲ್ಲ. ಈ ಮೊದಲೇ ಹೇಳಿದಂತೆ ನಾನು ನನ್ನ ಹೇಳಿಕೆಗೆ ಬದ್ಧ. ಚುನಾವಣೆಯಲ್ಲಿ ಕಾಂಗ್ರೆಸ್ 146 ಸ್ಥಾನಗಳನ್ನು ಗೆಲ್ಲಲಿದೆ ಎಂದರು.

"ಕರ್ನಾಟಕದ ಮತದಾರರು ಪ್ರಜ್ಞಾವಂತರು. ಅವರು ಡಬಲ್ ಇಂಜಿನ್ ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಂಡಿದ್ದಾರೆ. ರಾಜ್ಯದ ಜನತೆ ಕಾಂಗ್ರೆಸ್ ಬಗ್ಗೆ ಆಶಾವಾದಿಯಾಗಿದ್ದಾರೆ. ಈ ಬಾರಿ ಕಾಂಗ್ರೆಸ್‌ಗೆ ಸಂಖ್ಯಾಬಲ ಇರುವುದರಿಂದ ಸರ್ಕಾರ ರಚಿಸಲು ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ಇತರೆ ಯಾವುದೇ ರಾಜಕೀಯ ಪಕ್ಷಗಳೊಂದಿಗೆ ಮೈತ್ರಿ ಇಲ್ಲ" ಎಂದು ತಿಳಿಸಿದರು.

"2018ರ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಕ್ಕಿರಲಿಲ್ಲ. ಬಿಜೆಪಿಯನ್ನು ದೂರವಿಟ್ಟು ಕಾಂಗ್ರೆಸ್ ಹೈಕಮಾಂಡ್ ಸೂಚನೆಯ ಮೇರೆಗೆ ಜೆಡಿಎಸ್​ನೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದೆವು. ಆದರೆ, ಕೆಲವು ಶಾಸಕರು ಬಂಡಾಯ ಎದ್ದು ಮೈತ್ರಿ ಪಕ್ಷ ತೊರೆಯುವ ಮೂಲಕ ಸರ್ಕಾರವನ್ನು ಪತನಗೊಳಿಸಿದ್ದರು. ಆದರೆ ಈ ಬಾರಿ ಹಾಗಾಗುವುದಿಲ್ಲ. ಕಾಂಗ್ರೆಸ್ ಹಲವು ವಿಚಾರಗಳನ್ನು ಇಟ್ಟುಕೊಂಡು ಚುನಾವಣೆ ಎದುರಿಸಿದೆ. ಬಿಜೆಪಿ ಸರ್ಕಾರದ ಬೆಲೆ ಏರಿಕೆ, ಭ್ರಷ್ಟಾಚಾರ, 40 ಪರ್ಸೆಂಟ್ ಕಮಿಷನ್‌, ಪಿಎಸ್‌ಐ ಹಗರಣ, ಅಡುಗೆ ಅನಿಲ ಬೆಲೆ ಏರಿಕೆ ಸೇರಿದಂತೆ ಅನೇಕ ವಿಚಾರಗಳನ್ನು ಮುಂದಿಟ್ಟುಕೊಂಡು ಚುನಾವಣೆ ನಡೆಸಿದ್ದೇವೆ, ನಾವೇ ಸರ್ಕಾರ ರಚಿಸುತ್ತೇವೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ :ನಾವು ನಮ್ಮ 5 ಗ್ಯಾರಂಟಿಯ ಚಾಲೀಸ್ ಮಾಡುತ್ತೇವೆ: ಡಿ.ಕೆ.ಶಿವಕುಮಾರ್

ಕಾಂಗ್ರೆಸ್ ಸರ್ಕಾರ ರಚಿಸುವುದನ್ನು ಸೂಚಿಸುವ ಸಮೀಕ್ಷೆಯ ಭವಿಷ್ಯವನ್ನು ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸುತ್ತಿದ್ದಾರೆ. ರಾಜ್ಯದ ಹಲವೆಡೆ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸುತ್ತಿರುವ ಬಗ್ಗೆಯೂ ವರದಿಯಾಗಿದೆ.

ಇದನ್ನೂ ಓದಿ :ಎಕ್ಸಿಟ್​ ಪೋಲ್​ ಸಮೀಕ್ಷೆ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ, ಬಿಜೆಪಿಯೇ ಅಧಿಕಾರಕ್ಕೆ ಬರುತ್ತೆ : ಸಿಎಂ ಬೊಮ್ಮಾಯಿ

ಇನ್ನೊಂದೆಡೆ, ಸಮೀಕ್ಷೆ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, "ಚುನಾವಣಾ ಸಮೀಕ್ಷೆ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವುದಿಲ್ಲ. ಬಿಜೆಪಿಗೆ ಸ್ಪಷ್ಟ ಬಹುಮತ ಲಭಿಸಲಿದೆ. ಹಾಗಾಗಿ, ಯಾವುದೇ ರೆಸಾರ್ಟ್ ರಾಜಕೀಯ ಮಾಡುವ ಪ್ರಶ್ನೆಯೇ ಇಲ್ಲ. ನಿಜವಾದ ಫಲಿತಾಂಶ ಹೊರ ಬೀಳುವಾಗ ಸಮೀಕ್ಷೆಯ ವರದಿಯಲ್ಲಿ ಹೆಚ್ಚೂ ಕಡಿಮೆ ಆಗುತ್ತದೆ. ಈ ಸಮೀಕ್ಷೆಗಳು ಶೇಕಡಾ 100ರಷ್ಟು ನಿಖರವಾಗಿ ಇರುವುದಿಲ್ಲ. ರಾಜ್ಯದಲ್ಲಿ ಬಿಜೆಪಿಗೆ ಸಂಪೂರ್ಣ ಬಹುಮತ ಲಭಿಸಲಿದೆ" ಎಂದು ಹೇಳಿದರು.

ಇದನ್ನೂ ಓದಿ :ರಾಜ್ಯದಲ್ಲಿ ಬಿಜೆಪಿ 140 ಸ್ಥಾನಗಳನ್ನು ಗೆಲ್ಲುತ್ತದೆ : ಕೆ ಎಸ್ ಈಶ್ವರಪ್ಪ ವಿಶ್ವಾಸ

ABOUT THE AUTHOR

...view details