ಬೆಂಗಳೂರು: ನಮ್ಮ ಮೇಲೆ ಯಾವುದೇ ರೇಪ್ ಕೇಸ್ ಇಲ್ಲ. ಪರಿಶೀಲನೆ ನಡೆಸದೆ ಸುದ್ದಿ ಪ್ರಕಟ ಮಾಡಬಾರದು ಎಂಬ ಕಾರಣಕ್ಕೆ ಕೋರ್ಟ್ ಮೊರೆ ಹೋಗಿದ್ದೇವೆ ಎಂದು ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟೀಕರಣ ನೀಡಿದ್ದಾರೆ.
ನಾವು ಯಾಕೆ ನ್ಯಾಯಾಲಯಕ್ಕೆ ಹೋಗಿದ್ದೇವೆ ಎಂಬ ಪ್ರಶ್ನೆಗೆ ವಿಧಾನಸಭೆಯಲ್ಲಿ ಉತ್ತರಿಸುತ್ತ, ಸಮ್ಮಿಶ್ರ ಸರ್ಕಾರ ಪತನ ಮಾಡಿದವರ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ. ಅದಕ್ಕೆ ಕಾನೂನು ವ್ಯಾಪ್ತಿಯಲ್ಲಿರುವ ಅವಕಾಶ ಬಳಸಿಕೊಂಡಿದ್ದೇವೆ. ನಾವು ಯಾವುದೇ ತಪ್ಪು ಮಾಡಿಲ್ಲ. ಆಧುನಿಕ ತಂತ್ರಜ್ಞಾನ ಬಳಸಿ ಹೇಗೆ ಬೇಕಾದರೂ ವಿಡಿಯೋ ಮಾಡಬಹುದು.