ಬೆಂಗಳೂರು :ದೈನಂದಿನ ಕೃಷಿ ಚಟುವಟಿಕೆಗಳಿಗೆ ನೈಟ್ ಕರ್ಪ್ಯೂ, ವೀಕೆಂಡ್ ಕರ್ಪ್ಯೂ, ಜನತಾ ಕರ್ಪ್ಯೂ ಅನ್ವಯಿಸುವುದಿಲ್ಲ.
ಯಾವುದೇ ಇಲಾಖೆಯ ಯಾವುದೇ ಅಧಿಕಾರಿಗಳು ರೈತರ ದೈನಂದಿನ ಕೃಷಿ ಚಟುವಟಿಕೆಗಳಿಗೆ ತಡೆಯನ್ನಾಗಲಿ, ತೊಂದರೆಯನ್ನಾಗಲಿ ಮಾಡಬಾರದು ಎಂದು ಕೃಷಿ ಸಚಿವ ಬಿ ಸಿ ಪಾಟೀಲ್ ಸ್ಪಷ್ಟಪಡಿಸಿದ್ದಾರೆ.
ವಿಕಾಸಸೌಧದಲ್ಲಿ ಸಚಿವ ಬಿ ಸಿ ಪಾಟೀಲ್ ಮಾತನಾಡಿರುವುದು.. ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಇಂದು ಮಾತನಾಡಿದ ಅವರು, ಹೂವು, ಹಣ್ಣು, ದವಸ, ಧಾನ್ಯ ಮಾರುಕಟ್ಟೆಗೆ ಸಾಗಿಸಲು ಆರ್ಟಿಒ ಸೇರಿದಂತೆ ಯಾರೂ ತೊಂದರೆ ಮಾಡಬಾರದು.
ಬಿತ್ತನೆ ಕಾರ್ಯಕ್ಕಾಗಿ ಪೊಲೀಸ್ ಆಗಲೀ, ಯಾವುದೇ ಇಲಾಖೆಯಾಗಲಿ ತೊಂದರೆ ಮಾಡಬಾರದು ಎಂದು ಸೂಚನೆ ನೀಡಿದ್ದಾರೆ.
ಮುಂಗಾರು ಈಗಾಗಲೇ ಪ್ರಾರಂಭವಾಗಿದ್ದು, ರಸಗೊಬ್ಬರ ಅಂಗಡಿಗಳಿಗಾಗಲೀ, ರೈತ ಸಂಪರ್ಕ ಕೇಂದ್ರಗಳಿಗಾಗಲೀ, ಬಿತ್ತನೆ ಕಾರ್ಯಕ್ಕಾಗಲೀ ಯಾರೂ ಸಹ ತೊಂದರೆಯನ್ನುಂಟು ಮಾಡಬಾರದು.
ಕೆಲವು ಕಡೆ ಕೃಷಿ ಪರಿಕರಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿರುವುದು ತಿಳಿದು ಬಂದಿರುತ್ತದೆ. ಹೀಗೆ ಮಾಡುವುದು ತಪ್ಪು. ಎಲ್ಲಾ ಇಲಾಖೆಗಳು ಎಲ್ಲಾ ಇಲಾಖಾಧಿಕಾರಿಗಳು ರೈತರಿಗೆ ಕೃಷಿ ಚಟುವಟಿಕೆಗಳಿಗೆ ಸಹಕಾರ ನೀಡಬೇಕು.
ಕೃಷಿ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧ ಹೇರಬಾರದು ಎಂದು ಸೂಚಿಸಿದ ಅವರು, ಕೊರೊನಾ ಸುರಕ್ಷತೆ ಸಾಮಾಜಿಕ ಅಂತರದ ಜೊತೆಗೆ ರೈತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕೆಂದು ಸಲಹೆ ನೀಡಿದ್ದಾರೆ.
ಓದಿ:ಪಾಲಿಕೆ ಸಿಬ್ಬಂದಿಯ ರಜೆ ರದ್ದು.. ಸಾರ್ವಜನಿಕ ರಜಾ ದಿನಗಳಂದು ಕರ್ತವ್ಯಕ್ಕೆ ಹಾಜರಾಗುವಂತೆ ಬಿಬಿಎಂಪಿ ಸೂಚನೆ