ಕರ್ನಾಟಕ

karnataka

ETV Bharat / state

ಕೃಷಿ ಚಟುವಟಿಕೆ ನಡೆಸಲು ಯಾವುದೇ ನಿರ್ಬಂಧವಿಲ್ಲ: ಸಚಿವ ಬಿ.ಸಿ.ಪಾಟೀಲ್ - ಕೃಷಿ ಚಟುವಟಿಕೆ ನಡೆಸಲು ಯಾವುದೇ ನಿರ್ಬಂಧವಿಲ್ಲ: ಸಚಿವ ಬಿ.ಸಿ. ಪಾಟೀಲ್

ದೇವನಹಳ್ಳಿ ತಾಲೂಕು ಬೀರಸಂದ್ರ ಗ್ರಾಮದ  ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಕೃಷಿ ಉತ್ಪನ್ನಗಳ ಸರಕು ಸಾಗಾಣಿಕೆ, ಬೀಜ ಹಾಗೂ  ಗೊಬ್ಬರಗಳ ಸರಬರಾಜು ಸೇರಿದಂತೆ ಮತ್ತಿತರರ ಕೃಷಿ ಚಟುವಟಿಕೆಗಳ ಬಗ್ಗೆ ಅಗತ್ಯ ಕ್ರಮಗಳ ಕುರಿತು ವಿವಿಧ ಇಲಾಖಾ ಅಧಿಕಾರಿಗಳ ಜೊತೆ ಸಭೆ ನಡೆಸಲಾಯಿತು.

Minister B.C. Patil
ಕೃಷಿ ಚಟುವಟಿಕೆ ನಡೆಸಲು ಯಾವುದೇ ನಿರ್ಬಂಧವಿಲ್ಲ: ಸಚಿವ ಬಿ.ಸಿ. ಪಾಟೀಲ್

By

Published : Apr 14, 2020, 10:20 PM IST

ದೇವನಹಳ್ಳಿ/ಬೆಂಗಳೂರು: ಕೃಷಿ ಚಟುವಟಿಕೆ ನಡೆಸಲು ಸರ್ಕಾರ ರೈತರಿಗೆ ಯಾವುದೇ ನಿರ್ಬಂಧ ವಿಧಿಸಿಲ್ಲ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ರೈತರು ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಬಹುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.


ದೇವನಹಳ್ಳಿ ತಾಲೂಕು ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದಲ್ಲಿ ಕೊರೊನಾ ವೈರಾಣು ಸೋಂಕು ಹಿನ್ನೆಲೆಯಲ್ಲಿ ಕೃಷಿ ಉತ್ಪನ್ನಗಳ ಸರಕು ಸಾಗಾಣಿಕೆ, ಬೀಜ ಹಾಗೂ ಗೊಬ್ಬರಗಳ ಸರಬರಾಜು ಸೇರಿದಂತೆ ಮತ್ತಿತರರ ಕೃಷಿ ಚಟುವಟಿಕೆಗಳ ಬಗ್ಗೆ ಅಗತ್ಯ ಕ್ರಮಗಳ ಕುರಿತು ವಿವಿಧ ಇಲಾಖಾ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೃಷಿ ಸಚಿವ ಬಿ.ಸಿ.ಪಾಟೀಲ್, ಕೃಷಿ ಪರಿಕರಗಳು ಸೇರಿದಂತೆ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ದಾಸ್ತಾನು ಇಟ್ಟುಕೊಳ್ಳುವುದರೊಂದಿಗೆ ಜಿಲ್ಲೆಯ ಪ್ರತಿ ರೈತ ಸಂಪರ್ಕ ಕೇಂದ್ರಗಳಲ್ಲಿ ವಿತರಿಸಲು ಅಧಿಕಾರಿಗಳು ಕ್ರಮ ವಹಿಸಬೇಕು. ಕೃಷಿ ಚಟುವಟಿಕೆಗಳಿಗೆ ಯಾವುದೇ ರೀತಿಯ ಸಮಸ್ಯೆಗಳು ಉಂಟಾಗಬಾರದು. ಅಲ್ಲದೇ ರಸಗೊಬ್ಬರ ಮಾರಾಟ ಮಾಡುವ ಅಂಗಡಿಗಳನ್ನು ತೆರೆದು, ರಸಗೊಬ್ಬರ, ಔಷಧಿ, ಸೇರಿದಂತೆ ಮತ್ತಿತರ ಕೃಷಿ ಪರಿಕರಗಳು ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ರೈತರಿಗೆ ಕೃಷಿ ಚಟುವಟಿಕೆ ಕೈಗೊಳ್ಳಲು ಗ್ರೀನ್ ಪಾಸ್ ನೀಡುವ ವೇಳೆ ಸಂಚರಿಸುವ ಸ್ಥಳಗಳ ಮಾಹಿತಿ ಹಾಗೂ ಅಗತ್ಯ ದಾಖಲೆಗಳನ್ನು ಪಡೆದುಕೊಳ್ಳಬೇಕು. ರೈತರು ಗ್ರೀನ್ ಪಾಸ್‍ಗಳು ದುರುಪಯೋಗವಾಗದಂತೆ ಎಚ್ಚರ ವಹಿಸಬೇಕು. ಅಲ್ಲದೇ ಅನಗತ್ಯ ಓಡಾಟಕ್ಕೆ ಕಡಿವಾಣ ಹಾಕಿಕೊಳ್ಳುವ ಮೂಲಕ ಕೊರೊನಾ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಸಹಕರಿಸಬೇಕು ಎಂದರು.

ABOUT THE AUTHOR

...view details