ಕರ್ನಾಟಕ

karnataka

ETV Bharat / state

ರಸಗೊಬ್ಬರಕ್ಕೆ ಯಾವುದೇ ಕೊರತೆ ಇಲ್ಲ: ಕೇಂದ್ರ ಸಚಿವ ಸದಾನಂದಗೌಡ

ರಸಗೊಬ್ಬರ ಸಚಿವಾಲಯ ನಿರಂತರವಾಗಿ ರಸಗೊಬ್ಬರ ಲಭ್ಯತೆಯ ಬಗ್ಗೆ ತೀವ್ರ ನಿಗಾ ಇರಿಸಿದೆ. ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರೈತರಿಂದ ಯೂರಿಯಾ ಪೂರೈಕೆಗೆ ಬೇಡಿಕೆ ಎದುರಾದರೆ ಅದನ್ನು ಪೂರೈಸಲಾಗುತ್ತದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.

No shortage of fertilizer: Union Minister V Sadananda Gowda
ರಸಗೊಬ್ಬರಕ್ಕೆ ಯಾವುದೇ ಕೊರತೆ ಇಲ್ಲ: ಕೇಂದ್ರ ಸಚಿವ ಡಿ. ವಿ ಸದಾನಂದಗೌಡ

By

Published : Jul 6, 2020, 7:34 PM IST

ನವದೆಹಲಿ/ಬೆಂಗಳೂರು: ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ರಸಗೊಬ್ಬರಕ್ಕೆ ಯಾವುದೇ ಕೊರತೆ ಇಲ್ಲ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.

ನವದೆಹಲಿಯಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರನ್ನು ಭೇಟಿ ಮಾಡಿದರು. ರಸಗೊಬ್ಬರ ಪೂರೈಕೆ ಸಂಬಂಧ ಮಾತುಕತೆ ನಡೆಸಿದರು. ಈ ವೇಳೆ ರಾಜ್ಯ ಸರ್ಕಾರಗಳ ಜೊತೆ ಸಮಾಲೋಚನೆ ನಡೆಸಿ ಅಗತ್ಯ ಪ್ರಮಾಣದಷ್ಟು ರಸಗೊಬ್ಬರವನ್ನು ಈಗಾಗಲೇ ರಾಜ್ಯಗಳಲ್ಲಿ ದಾಸ್ತಾನು ಮಾಡಲಾಗಿದೆ. ರಾಜ್ಯದಲ್ಲಿ ಬೇಡಿಕೆಗೆ ತಕ್ಕಂತೆ ಅಗತ್ಯ ರಸಗೊಬ್ಬರ ಪೂರೈಕೆ ಮಾಡುವುದಾಗಿ ಮಧ್ಯಪ್ರದೇಶ ಸಿಎಂಗೆ ಭರವಸೆ ನೀಡಿದರು.

ರಸಗೊಬ್ಬರ ಸಚಿವಾಲಯ ನಿರಂತರವಾಗಿ ರಸಗೊಬ್ಬರ ಲಭ್ಯತೆಯ ಬಗ್ಗೆ ತೀವ್ರ ನಿಗಾ ಇರಿಸಿದೆ. ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರೈತರಿಂದ ಯೂರಿಯಾ ಪೂರೈಕೆಗೆ ಬೇಡಿಕೆ ಎದುರಾದರೆ ಅದನ್ನು ಪೂರೈಸಲು ಸಾಧ್ಯವಿದೆ. ಕೇಂದ್ರ ಸರ್ಕಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ರೈತರಿಗೆ ಸಕಾಲದಲ್ಲಿ ಕೈಗೆಟುಕುವ ದರದಲ್ಲಿ ಸೂಕ್ತ ಪ್ರಮಾಣದ ರಸಗೊಬ್ಬರ ಪೂರೈಕೆಯನ್ನು ಖಾತ್ರಿಪಡಿಸಲು ಬದ್ಧವಾಗಿದೆ ಎಂದಿದ್ದಾರೆ.

ಮೇ ಮತ್ತು ಜೂನ್ ಅವಧಿಯಲ್ಲಿ ದೇಶಾದ್ಯಂತ ನಿರೀಕ್ಷೆಗಿಂತ ಉತ್ತಮ ಮಳೆಯಾಗಿದ್ದರಿಂದ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಡಿಬಿಟಿ ಪ್ರಮಾಣ ಗಣನೀಯವಾಗಿ ಹೆಚ್ಚಳವಾಗಿದೆ. ಹೆಚ್ಚುವರಿಯಾಗಿ ರಸಗೊಬ್ಬರಕ್ಕೆ ಯಾವುದೇ ಬೇಡಿಕೆ ಎದುರಾದರೂ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಜೊತೆ ಸಮಾಲೋಚಿಸಿ ದೇಶೀಯ ಉತ್ಪಾದನೆ ಹೆಚ್ಚಳ ಮತ್ತು ಆಮದು ಮೂಲಕ ಪೂರೈಕೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ABOUT THE AUTHOR

...view details