ಬೆಂಗಳೂರು:ಕರ್ನಾಟಕ ರತ್ನ ದಿವಂಗತ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಸ್ಮರಣಾರ್ಥವಾಗಿ ನಾಯಂಡಳ್ಳಿ ಜಂಕ್ಷನ್ನಿಂದ ಬನ್ನೇರುಘಟ್ಟ ವರೆಗಿನ ರಸ್ತೆಗೆ ಪುನೀತ್ ರಾಜ್ ಕುಮಾರ್ ಹೆಸರಿಡಲಾಗಿದೆ. ಅದ್ಧೂರಿ ಕಾರ್ಯಕ್ರಮದ ಫ್ಲೆಕ್ಸ್‌ನಲ್ಲಿ ಪುನೀತ್ ರಾಜ್‍ಕುಮಾರ್ ಫೋಟೋ ಇಲ್ಲದೇ ಇದ್ದುದಕ್ಕೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪುನೀತ್ ನಿಧನದ ನಂತರದಲ್ಲಿ ಅವರನ್ನು ವಿವಿಧ ರೀತಿಯಲ್ಲಿ ನೆನಪಿಸಿಕೊಳ್ಳುವ ಕಾರ್ಯ ನಡೆಯುತ್ತಿದೆ. ರಸ್ತೆ, ವೃತ್ತ, ಪಾರ್ಕ್ಗೆ ಅವರ ಹೆಸರಿಡಲಾಗುತ್ತಿದೆ. ಈಗ ಮೈಸೂರು ರಸ್ತೆಯಿಂದ ಬನ್ನೇರುಘಟ್ಟವರೆಗಿನ ರಸ್ತೆಗೆ ಪುನೀತ್ ಹೆಸರಿಡುವ ಪ್ರಸ್ತಾವನೆಗೆ ಒಪ್ಪಿಗೆ ಸಿಕ್ಕಿದೆ. ಇಂದು ಈ ರಸ್ತೆಗೆ ಪುನೀತ್ ರಾಜ್‍ಕುಮಾರ್ ಹೆಸರು ನಾಮಕರಣ ಮಾಡಲಾಯಿತು. ಆದರೆ ಈ ಕಾರ್ಯಕ್ರಮಕ್ಕಾಗಿ ಫ್ಲೆಕ್ಸ್ ಮಾಡಿಸಲಾಗಿದ್ದು, ಪುನೀತ್ ಫೋಟೋ ಅಲ್ಲಿ ಕಂಡುಬಂದಿಲ್ಲ.