ಬೆಂಗಳೂರು: ಉಪಚುನಾವಣೆ ನಡೆಯುವ ಕ್ಷೇತ್ರಗಳಿಗೆ ಬಜೆಟ್ನಲ್ಲಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ತವರು ಜಿಲ್ಲೆ ಶಿವಮೊಗ್ಗದಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಿಎಂ ಶಿವಮೊಗ್ಗ ಜಿಲ್ಲಾ ಪ್ರವಾಸಕ್ಕೆ ತೆರಳಿದರು. ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ತೆರಳುವ ಮುನ್ನ ಅಧಿಕೃತ ನಿವಾಸ ಕಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗಕ್ಕೆ ಹೊರಟಿದ್ದೇನೆ. ಸೊರಬ ತಾಲೂಕಿನಲ್ಲಿ ಕಾರ್ಯಕ್ರಮ ಇದೆ. ಸೊರಬದಿಂದ ಶಿವಮೊಗ್ಗಕ್ಕೆ ಬಂದು ಸಮಾರಂಭದಲ್ಲಿ ಭಾಗವಹಿಸಿ ನಾಳೆ ವಾಪಸ್ ಬರುತ್ತೇನೆ. ಬಜೆಟ್ಗೆ ಸಂಬಂಧಿಸದಂತೆ ಎಲ್ಲ ಚರ್ಚೆ ಮುಗಿದಿದೆ. ಶಿವಮೊಗ್ಗದಿಂದ ವಾಪಸ್ ಬಂದು ಬಜೆಟ್ ಸಿದ್ಧತೆ ಅಂತಿಮಗೊಳಿಸುತ್ತೇನೆ ಎಂದು ತಿಳಿಸಿದರು.