ಬೆಂಗಳೂರು: ಮರಾಠ ಪ್ರಾಧಿಕಾರ ರಚನೆ ವಿರೋಧಿಸಿ ರಾಜ್ಯದೆಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿದೆ. ಡಿ. 5ರಂದು ಬಂದ್‌ಗೆ ಕರೆಕೊಟ್ಟಿದ್ದು, ಎಲ್ಲ ಕನ್ನಡಪರ ಸಂಘಟನೆಗಳು ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ಆದರೆ, ಈ ಬಂದ್‌ಗೆ ಬೀದಿ ಬದಿ ವ್ಯಾಪಾರಿಗಳಿಂದ ಯಾವುದೇ ರೀತಿಯ ಬೆಂಬಲ ವ್ಯಕ್ತವಾಗಿಲ್ಲ.
''ಡಿ.5ರ ಬಂದ್‌ಗೆ ಬೀದಿ ಬದಿ ವ್ಯಾಪಾರಿಗಳಿಂದ ಬೆಂಬಲವಿಲ್ಲ''; ರಂಗಸ್ವಾಮಿ ಹೇಳಿಕೆ
ಮರಾಠ ಪ್ರಾಧಿಕಾರ ರಚನೆ ವಿರೋಧಿಸಿ ಡಿ. 5ರಂದು ಕರ್ನಾಟಕ ರಾಜ್ಯ ಬಂದ್‌ಗೆ ಕರೆ ನೀಡಲಾಗಿದೆ. ಆದ್ರೆ ಬೀದಿ ಬದಿ ವ್ಯಾಪಾರಿಗಳಿಂದ ಬಂದ್‌ಗೆ ಸಹಕಾರ ಇಲ್ಲ ಎಂದು ಬೀದಿ ಬದಿ ವ್ಯಾಪಾರಿ ಸಂಘಟನೆಗಳ ರಾಜ್ಯಾಧ್ಯಕ್ಷ ರಂಗಸ್ವಾಮಿ ತಿಳಿಸಿದ್ದಾರೆ.
ರಂಗಸ್ವಾಮಿ
ಡಿ.5 ರಂದು ತಮ್ಮ ಬೀದಿ ಬದಿ ವ್ಯಾಪಾರ ನಿಲ್ಲಿಸುವುದಿಲ್ಲ ಅಂತಾ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ರಂಗಸ್ವಾಮಿ ತಿಳಿಸಿದ್ದಾರೆ. "ಬಂದ್ ಇಲ್ಲ, ಬಂದ್ ಇಲ್ಲ, ಡಿಸೆಂಬರ್ 5 ರಂದು ಕರ್ನಾಟಕ ರಾಜ್ಯಾದ್ಯಂತ ಬೀದಿ ಬದಿ ವ್ಯಾಪಾರಿಗಳ ಬಂದ್ ಇಲ್ಲ" ಅಂತಾ ಹೇಳಿದ್ದಾರೆ.
ರಾಜ್ಯಾದ್ಯಂತ ನಮ್ಮ ಸಮಿತಿ ಪದಾಧಿಕಾರಿಗಳು ಸೇರಿ ಈ ನಿರ್ಣಯ ತೆಗೆದುಕೊಂಡಿದ್ದೇವೆ ಅಂತಾ ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಕಡೆಯಿಂದ ತಿಳಿಸುತ್ತಿದ್ದೇವೆ ಎಂದು ರಂಗಸ್ವಾಮಿ ಈ ಕುರಿತು ಮಾಹಿತಿ ನೀಡಿದ್ದಾರೆ.