ಕರ್ನಾಟಕ

karnataka

ETV Bharat / state

ಬಾರ್, ರೆಸ್ಟೋರೆಂಟ್​​ಗಳಿಂದ ಶಬ್ದ ಮಾಲಿನ್ಯ : ಬಿಬಿಎಂಪಿಯಿಂದ ಹೈಕೋರ್ಟ್​ಗೆ ಪ್ರಮಾಣ ಪತ್ರ ಸಲ್ಲಿಕೆ - undefined

ಉದ್ಯಾನ ನಗರಿಯಲ್ಲಿ ಬಾರ್​ಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಸಮಸ್ಯೆಗಳು ಹೆಚ್ಚಾಗುತ್ತಲೇ ಇವೆ. ಈ ಕುರಿತು ಇಂದಿರಾನಗರದ ನಿವಾಸಿಗಳು ಸಾರ್ವಜನಿಕ ಹಿತಾಸಕ್ತಿಯಡಿ ಹೈಕೋರ್ಟ್​ಗೆ ಬಾರ್​ಗಳಿಂದ ಶಬ್ದ ಮಾಲಿನ್ಯ ಉಂಟಾಗುತ್ತಿದೆ ಎಂದು ಅರ್ಜಿ ಸಲ್ಲಿಸಿದ್ದರು. ಈ ಕುರಿತು ಬಿಬಿಎಂಪಿ ಪರ ವಕೀಲರು ಪ್ರಮಾಣ ಪತ್ರ ಸಲ್ಲಿಕೆ ಮಾಡಿದ್ದಾರೆ.

ಬಿಬಿಎಂಪಿ

By

Published : Jul 16, 2019, 4:12 AM IST

ಬೆಂಗಳೂರು:ಬಾರ್ ಮತ್ತು ರೆಸ್ಟೋರೆಂಟ್‌ ಗಳಲ್ಲಿ ಶಬ್ದ ಮಾಲಿನ್ಯ ತಡೆಗಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ಗೆ ಬಿಬಿಎಂಪಿ ಪರ ವಕೀಲರು ಪತ್ರ ಸಲ್ಲಿಕೆ ಮಾಡಿದ್ದಾರೆ.

ಈ ಕುರಿತು ಇಂದಿರಾನಗರದ ಸ್ಥಳೀಯ ನಿವಾಸಿಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮುಖ್ಯ ನ್ಯಾಯಮೂರ್ತಿಗಳಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಬಿಬಿಎಂಪಿ ಪರ ವಕೀಲರು ವಾದ ಮಂಡನೆ ಮಾಡಿ, ಶಬ್ದ ಮಾಲಿನ್ಯ ಉಂಟು ಮಾಡುತ್ತಿರುವ ಬಾರ್ ಮತ್ತು ರೆಸ್ಟೋರೆಂಟ್​ಗಳ ಬಗ್ಗೆ ಪೊಲೀಸರು ಪರಿಶೀಲನೆ ನಡೆಸಿ ಎರಡು ಪಬ್​ಗಳಲ್ಲಿ ಶಬ್ದ ಮಾಡುವ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ನ್ಯಾಯಪೀಠಕ್ಕೆ ತಿಳಿಸಿ ಈ ಸಂಬಂಧ ಪತ್ರ ಸಲ್ಲಿಕೆ ಮಾಡಿದರು.

ಈ ವೇಳೆ ನ್ಯಾಯಪೀಠವು ಮುಂದಿನ ಕ್ರಮದ ಬಗ್ಗೆ ಆಗಸ್ಟ್ 13 ರೊಳಗೆ ವರದಿ ಸಲ್ಲಿಸಲು ಸೂಚಿಸಿ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.

For All Latest Updates

TAGGED:

ABOUT THE AUTHOR

...view details