ಬೆಂಗಳೂರು: ಹೊಸಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಡಿ.5 ರಂದು ನಡೆಯಲಿರುವ ಉಪ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನವೆಂಬರ್ 15ರಂದು ಶುಕ್ರವಾರ ನಾಮಪತ್ರ ಸಲ್ಲಿಸುವುದಾಗಿ ಶರತ್ ಬಚ್ಚೇಗೌಡ ಘೋಷಿಸಿದ್ದು, ಬಿಜೆಪಿಗೆ ಆರಂಭದಲ್ಲೇ ಸವಾಲು ಎದುರಾಗಿದೆ.
ನಾಮಪತ್ರ ಸಲ್ಲಿಕೆ ದಿನಾಂಕ ಘೋಷಿಸಿದ ಶರತ್ ಬಚ್ಚೇಗೌಡ: ಹೊಸಕೋಟೆಯಲ್ಲಿ ತ್ರಿಕೋನ ಸ್ಪರ್ಧೆ ಕನ್ಫರ್ಮ್? - BJP ticket aspirant Sarath Bachegowda
ಹೊಸಕೋಟೆ ಕ್ಷೇತ್ರದಲ್ಲಿ ಬಿಜೆಪಿಗೆ ಸ್ವಪಕ್ಷದವರಿಂದಲೇ ಸವಾಲು ಎದುರಾಗಿದೆ. ನ. 15 ರಂದು ನಾಮಪತ್ರ ಸಲ್ಲಿಸುವುದಾಗಿ ಅವರು ಘೋಷಿಸಿದ್ದಾರೆ. ಅಲ್ಲದೆ, ಕೆಲವರು ಹೇಳಿಕೊಂಡು ತಿರುಗುತ್ತಿರುವಂತೆ ನಾನು ಯಾವುದೇ ಕಾರಣಕ್ಕೂ ಚುನಾವಣೆಯಿಂದ ಹಿಂದೆ ಸರಿಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
![ನಾಮಪತ್ರ ಸಲ್ಲಿಕೆ ದಿನಾಂಕ ಘೋಷಿಸಿದ ಶರತ್ ಬಚ್ಚೇಗೌಡ: ಹೊಸಕೋಟೆಯಲ್ಲಿ ತ್ರಿಕೋನ ಸ್ಪರ್ಧೆ ಕನ್ಫರ್ಮ್?](https://etvbharatimages.akamaized.net/etvbharat/prod-images/768-512-5022094-thumbnail-3x2-nin.jpg)
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕು ಸೂಲಿಬೆಲೆ ಹೋಬಳಿಯ ಬಾವಾಪುರ, ಭುವನಹಳ್ಳಿಯಲ್ಲಿ ಶುದ್ಧ ಕುಡಿಯುವ ನೀರು ಘಟಕ ಉದ್ಘಾಟನೆ ಹಾಗೂ ಸೂಲಿಬೆಲೆ ವಾಲ್ಮೀಕಿ ನಗರದಲ್ಲಿ ಕೋದಂಡರಾಮಸ್ವಾಮಿ ದೇಗುಲ ನಿರ್ಮಾಣ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಕೆಲವರು ಹೇಳಿಕೊಂಡು ತಿರುಗುತ್ತಿರುವಂತೆ ನಾನು ಯಾವುದೇ ಕಾರಣಕ್ಕೂ ಚುನಾವಣೆಯಿಂದ ಹಿಂದೆ ಸರಿಯಲ್ಲ. ಸ್ವಾಭಿಮಾನಕ್ಕಾಗಿ ಚುನಾವಣೆಯಲ್ಲಿ ಅಖಾಡಕ್ಕೆ ಇಳಿಯುತ್ತೇನೆ. ಕಾರ್ಯಕರ್ತರು ನನ್ನ ಗೆಲುವಿಗೆ ಶ್ರಮಿಸಬೇಕು ಎಂದು ಇದೇ ವೇಳೆ ಮನವಿ ಮಾಡಿದರು.
ಕಡೆಯವರಿಗೂ ಬಿಜೆಪಿ ಟಿಕೆಟ್ ಅಕಾಂಕ್ಷಿ ಎಂದು ಹೇಳುತ್ತಿದ್ದ ಅವರು, ಈಗ ನಾಮಪತ್ರ ಸಲ್ಲಿಕೆಯ ದಿನವನ್ನು ಅಧಿಕೃತವಾಗಿ ಘೋಷಿಸುವ ಮೂಲಕ ತ್ರಿಕೋನ ಸ್ಪರ್ಧೆಯನ್ನು ಖಚಿತಪಡಿಸಿದ್ದಾರೆ.