ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ನಲ್ಲಿ (ಬಿಇಎಲ್) ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ನಾನ್ ಇಂಜಿನಿಯರಿಂಗ್ ವಿಭಾಗದಲ್ಲಿ ಒಂದು ವರ್ಷದ ಅಪ್ರೆಂಟಿಸ್ ಹುದ್ದೆ ನೇಮಕಾತಿಗೆ ನಡೆಯಲಿದೆ. ಬೆಂಗಳೂರಿನ ಘಟಕದಲ್ಲಿ ಈ ಹುದ್ದೆಗಳು ಖಾಲಿ ಇದ್ದು, ವಾಣಿಜ್ಯ ಪದವೀಧರರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಈ ಹುದ್ದೆಗಳನ್ನು ವಾಕ್ ಇನ್ ಇಂಟರ್ವ್ಯೂ ಮೂಲಕ ಆಯ್ಕೆ ನಡೆಸಲಾಗುವುದು. ಈ ಹುದ್ದೆಯಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ನೇರ ಸಂದರ್ಶನದಲ್ಲಿ ಭಾಗಿಯಾಗಬಹುದಾಗಿದೆ. ಹುದ್ದೆ, ಸೇರಿದಂತೆ ಅದಕ್ಕೆ ಸಂಬಂಧಿಸಿದ ಹೆಚ್ಚಿನ ವಿವರವಾದ ಮಾಹಿತಿ ಕೆಳಗಿನಂತಿದೆ.
ಹುದ್ದೆ ವಿವರ: ಕಾಮರ್ಸ್ ವಿಭಾಗದಲ್ಲಿ ಅಂದರೆ, ಬಿಕಾಂ ಮತ್ತು ಬಿಬಿಎ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆ ಸಂಖ್ಯೆ ಬಗ್ಗೆ ನಿರ್ದಿಷ್ಟಗೊಳಿಸಿಲ್ಲ. ಈ ಹುದ್ದೆಗಳು ಸಂಪೂರ್ಣವಾಗಿ ತಾತ್ಕಾಲಿಕವಾಗಿದ್ದು, ಒಂದು ವರ್ಷದ ಅವಧಿಗೆ ಮಾತ್ರ ಹುದ್ದೆ ಆಯ್ಕೆ ನಡೆಯಲಿದೆ.
ವಿದ್ಯಾರ್ಹತೆ:ಅಭ್ಯರ್ಥಿಗಳು ಮೇಲೆ ತಿಳಿಸಿದಂತೆ ಬಿಕಾಂ ಅಥವಾ ಬಿಬಿಎ ಪದವಿ ಹೊಂದಿರಬೇಕು. 1-1-2021ರಲ್ಲಿ ಅಧಿಕೃತ ವಿಶ್ವ ವಿದ್ಯಾಲಯ ಅಥವಾ ಮಂಡಳಿಯಿಂದ ಶೇ 40ರಷ್ಟು ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಉನ್ನತ ವಿದ್ಯಾಭ್ಯಾಸ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅನರ್ಹರಾಗಿದ್ದಾರೆ. ದಕ್ಷಿಣ ರಾಜ್ಯದ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.
ವಯೋಮಿತಿ:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18ವರ್ಷ ಮತ್ತು ಗರಿಷ್ಠ ವಯೋಮಿತಿ 25 ವರ್ಷ ಮೀರಿರಬಾರದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.